ನವದೆಹಲಿ: ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಗೆ ಕಾರ್ಯ ತಂತ್ರ ರೂಪಿಸಲು ಈಗಿನಿಂದಲೇ ತಯಾರಿನಡೆಸಿದೆ.
ಇದರ ಭಾಗವಾಗಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕ್ಷೇತ್ರವಾರು ಇರುವ ಶಾಸಕರ ಮೂಲಕ ಅಭಿಪ್ರಾಯ ಸಂಗ್ರಹಿಸಿ ಗೆಲ್ಲುವ ಕಾರ್ಯತಂತ್ರ ರೂಪಿಸಲಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ ಕಳೆದ ನಾಲ್ಕು ವರ್ಷಗಳಲ್ಲಿ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಕುರಿತಾಗಿ ಶಾಸಕರ ಜೊತೆ ಖುದ್ದಾಗಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.
ಝೀ ನ್ಯೂಸ್ ಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಮೋದಿ ನಮೋ ಆಪ್ ಮೂಲಕ ತಮ್ಮ ಅಭಿಪ್ರಾಯವನ್ನು ಆಯಾ ಕ್ಷೇತ್ರಗಳಿಗೆ ಸಂಬಂಧಿಸಿದ ಹಾಗೆ ಹಂಚಿಕೊಳ್ಳಲಿದ್ದಾರೆ.ಅಲ್ಲದೇ ರಾಜ್ಯವಾರು ಇರುವ ಪ್ರಮುಖ ನಾಯಕರ ಮಾಹಿತಿಯ ವಿವರಣೆಯನ್ನು ಕೇಳಲಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು 2019 ಕ್ಕೆ ಬಿಜೆಪಿಯ ಲೋಕಸಭಾ ಅಭ್ಯರ್ಥಿಗಳನ್ನು ಮೋದಿಯವರೇ ಸ್ವತಃ ಆಯ್ಕೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಶಾಸಕರ ಜೊತೆಗೆ ಅಭಿಪ್ರಾಯ ಸಂಗ್ರಹಿಸುವುದಲ್ಲದೆ ಸ್ವತಃ ಸ್ಥಳೀಯ ಜನರ ಅಭಿಪ್ರಾಯಗಳನ್ನು ಸಹ ಅವರು ಸಂಗ್ರಹಿಸಲಿದ್ದಾರೆ ಎನ್ನಲಾಗಿದೆ.