ನವದೆಹಲಿ: ಪಂಜಾಬ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯಲ್ಲಿ (PM Modi security lapse) ಉಂಟಾದ ಲೋಪದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಇಂದು (ಸೋಮವಾರ) ವಿಚಾರಣೆ ನಡೆಯಿತು. 


COMMERCIAL BREAK
SCROLL TO CONTINUE READING

ಜನವರಿ 5 ರಂದು ಪಂಜಾಬ್‌ಗೆ ಪ್ರಧಾನಿಯವರ ಭೇಟಿಯ ಸಂದರ್ಭದಲ್ಲಿ ಭದ್ರತಾ ಲೋಪಗಳ ಬಗ್ಗೆ ತನಿಖೆ ಮಾಡಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ಸ್ಥಾಪಿಸಲು ಸುಪ್ರೀಂ ಒಪ್ಪಿಗೆ ನೀಡಿದೆ. 


ಪ್ರಧಾನಿ ಮೋದಿಯವರ ಭದ್ರತೆಯ ಲೋಪವನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ (PM Modi security lapse investigation) ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. 


ಈ ವಿಚಾರದಲ್ಲಿ ತಮ್ಮ ವಿಚಾರಣೆಯನ್ನು ಮುಂದುವರೆಸದಂತೆ ಕೇಂದ್ರ ಮತ್ತು ಪಂಜಾಬ್ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಹೇಳಿದೆ. 


ಪಂಜಾಬ್ ಸರ್ಕಾರಕ್ಕೆ ಛೀಮಾರಿ:


ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ (Supreme Court) ಪಂಜಾಬ್ ಸರ್ಕಾರಕ್ಕೆ ಛೀಮಾರಿ ಹಾಕಿದೆ. ತಪ್ಪಾಗಿದೆಯೋ ಇಲ್ಲವೋ ಎಂಬುದನ್ನು ನಿರ್ಧರಿಸಲು ನಿಮಗೆ ಸಾಧ್ಯವಾಗದೇ ಇರುವಾಗ ನೀವು ನ್ಯಾಯಾಲಯಕ್ಕೆ ಏಕೆ ಬಂದಿದ್ದೀರಿ ಎಂದು ಸುಪ್ರೀಂ ಕೋರ್ಟ್ ಕೇಳಿದೆ.


ಪ್ರಧಾನಮಂತ್ರಿ ನರೇಂದ್ರ ಮೋದಿಯವರ (PM Modi) ಭದ್ರತೆಯಲ್ಲಿನ ಲೋಪಗಳ ವಿಚಾರಣೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಪೀಠ ನಡೆಸುತ್ತಿದೆ. 


ಫ್ಲೈಓವರ್‌ನಲ್ಲಿ ಸಿಲುಕಿಕೊಂಡ ಪ್ರಧಾನಿ:


MSP ಮೇಲೆ ಕಾನೂನುಬದ್ಧ ಖಾತರಿಗಾಗಿ ಒತ್ತಾಯಿಸಿ ರೈತ ಗುಂಪುಗಳು ಪ್ರಾರಂಭಿಸಿದ #ModiGoBack ಅಭಿಯಾನದಲ್ಲಿ ಭಾಗವಹಿಸಿದ ರೈತರ ದಿಗ್ಬಂಧನದಿಂದಾಗಿ ಮೊಗಾ-ಫಿರೋಜ್‌ಪುರ ಮಾರ್ಗದ ಪಿಯಾರಿಯಾನಾ ಗ್ರಾಮದ ಬಳಿಯ ಫ್ಲೈಓವರ್‌ನಲ್ಲಿ ಪ್ರಧಾನಿ ಸಿಲುಕಿಕೊಂಡರು. 


42,750 ಕೋಟಿ ರೂ.ಗಳ ಒಟ್ಟು ಮೊತ್ತದ ಯೋಜನೆಗಳನ್ನು ಉದ್ಘಾಟಿಸಲು ಎರಡು ವರ್ಷಗಳ ನಂತರ ಪ್ರಧಾನಿ ಮೋದಿ ಪಂಜಾಬ್‌ಗೆ ಭೇಟಿ ನೀಡಿದ್ದರು.


'ಬೃಹತ್ ಭದ್ರತಾ ಲೋಪ' ಉಂಟಾದಾಗ ಪ್ರಧಾನಿಯವರ ಪಂಜಾಬ್ ಭೇಟಿಗೆ ಸಂಬಂಧಿಸಿದ ದಾಖಲೆಗಳನ್ನು "ಭದ್ರಪಡಿಸಿ ಮತ್ತು ಸಂರಕ್ಷಿಸಿ" ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಶುಕ್ರವಾರ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. 


ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬ್ ಪ್ರವಾಸದ ವೇಳೆ ಭದ್ರತಾ ಲೋಪ ಎಸಗಿರುವ ಬಗ್ಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.


ಇದನ್ನೂ ಓದಿ: PM Modi Security Breach : ಪಿಎಂ ಮೋದಿಯವರ ಭದ್ರತಾ ಲೋಪ : ಪಂಜಾಬ್ ADGP ಪತ್ರದಿಂದ ಮಾಹಿತಿ ಬಹಿರಂಗ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.