ನವದೆಹಲಿ: ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಬುಧವಾರ, ಪ್ರಧಾನಿ ನರೇಂದ್ರ ಮೋದಿ ಅವರ ಪೋಷಕರ ಜನನ ಪ್ರಮಾಣಪತ್ರವನ್ನು ತೋರಿಸಿದರೆ ಜನರು ಕೂಡ ಸಂಬಂಧಿತ ದಾಖಲೆಗಳನ್ನು ನೀಡುತ್ತಾರೆ ಎಂದು ಹೇಳಿದರು.


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಹೊಸ ಪೌರತ್ವ ಕಾಯ್ದೆ ಮತ್ತು ಎನ್‌ಆರ್‌ಸಿಯನ್ನು ವಿರೋಧಿಸುವ ನಿರ್ಣಯವನ್ನು ಅಂಗೀಕರಿಸಿದ ನಾಲ್ಕು ದಿನಗಳ ನಂತರ ದಿಗ್ವಿಜಯ ಸಿಂಗ್ ಅವರ ಹೇಳಿಕೆ ಬಂದಿದೆ.


'ಪ್ರಧಾನಿ ಮೋದಿ ಅವರ ತಂದೆ ಮತ್ತು ತಾಯಿಯ ಜನನ ಪ್ರಮಾಣಪತ್ರವನ್ನು ನಮಗೆ ತೋರಿಸಬೇಕು ಎಂದು ನಾವು ಹೇಳುತ್ತಿದ್ದೇವೆ, (ಮತ್ತು ಅದನ್ನು ಮಾಡಿದರೆ) ನಾವು ಸಂಬಂಧಿಸಿದ ಎಲ್ಲ ದಾಖಲೆಗಳನ್ನು ತಯಾರಿಸುತ್ತೇವೆ' ಎಂದು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಎನ್‌ಆರ್‌ಸಿ ವಿರೋಧಿ ಪ್ರತಿಭಟನಾಕಾರರ ಬಗ್ಗೆ ಕೇಳಿದಾಗ ಹೇಳಿದರು.ಇನ್ನು ಮುಂದುವರೆದು ಅಂತಹ ಕಾನೂನನ್ನು ಜಾರಿಗೆ ತಂದರೆ ಯಾವುದೇ ದಾಖಲೆಗಳನ್ನು ಸರ್ಕಾರಿ ಅಧಿಕಾರಿಗಳಿಗೆ ನೀಡುವುದಿಲ್ಲ ಎಂದು ಹೇಳಿದರು.


ಸಂಸತ್ತಿನ ನಗರಾಭಿವೃದ್ಧಿ ಸ್ಥಾಯಿ ಸಮಿತಿಯ ಇತರ ಸದಸ್ಯರೊಂದಿಗೆ ದಿಗ್ವಿಜಯ ಸಿಂಗ್ ಇಂದೋರ್‌ಗೆ ಭೇಟಿ ನೀಡಿದ್ದರು.