ಪಾಟ್ನಾ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ ಏಪ್ರಿಲ್ 2 ರಂದು ಬಿಹಾರ ಮತ್ತು ಒಡಿಶಾದಲ್ಲಿ ಮೂರು ಚುನಾವಣಾ ರ‍್ಯಾಲಿಗಳನ್ನು ನಡೆಸಲಿದ್ದಾರೆ.


COMMERCIAL BREAK
SCROLL TO CONTINUE READING

ಮುಂಬರುವ ಲೋಕಸಭೆ ಚುನಾವಣೆಗಾಗಿ ಬಿಹಾರದಲ್ಲಿ ತಮ್ಮ ಚುನಾವಣಾ ಪ್ರಚಾರ ನಡೆಸಲಿರುವ ಪ್ರಧಾನಿ ಮೋದಿ ಜಮುಯಿ ಮತ್ತು ಗಯಾದಲ್ಲಿ ರ‍್ಯಾಲಿಗಳನ್ನು ಕೈಗೊಳ್ಳಲಿದ್ದಾರೆ. ಒಡಿಶಾದ ಕಲಾಹಂಡಿಯಲ್ಲಿ ಕೂಡಾ ಚುನಾವಣಾ ರ‍್ಯಾಲಿ ನಡೆಸಲಿದ್ದಾರೆ.


ಬಿಜೆಪಿ ಬಿಹಾರ ಘಟಕ ನೀಡಿರುವ ಮಾಹಿತಿ ಪ್ರಕಾರ, ಬಿಜೆಪಿಯ ರಾಜ್ಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಮತ್ತು ರಾಜ್ಯದ ಅಧ್ಯಕ್ಷ ನಿತ್ಯಾನಂದ ರೈ ಅವರು ಮಧ್ಯಾಹ್ನ ಜಾಮುಯಿಯಲ್ಲಿ ನಡೆಯಲಿರುವ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಅವರಿಗೆ ಸಾಥ್ ನೀಡಲಿದ್ದಾರೆ. 


ಗಯಾದಲ್ಲಿ ಸಂಜೆ ಆಯೋಜಿಸಲಾಗಿರುವ ರ‍್ಯಾಲಿಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ, ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ಮತ್ತು ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಪಾಲ್ಗೊಳ್ಳಲಿದ್ದಾರೆ.


ವಿಶೇಷ ವಿಷಯವೆಂದರೆ ಈ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸುತ್ತಿಲ್ಲ. ಲ್ಜೆಪಿ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ಪಾಸ್ವಾನ್ ಜಮುಯಿದಿಂದ ಸ್ಪರ್ಧಿಸಲಿದ್ದಾರೆ. ಜೆಡಿಯು ಅಭ್ಯರ್ಥಿ ವಿಜಯ್ ಮಂಝಿ ಗಯಾದಿಂದ ಸ್ಪರ್ಧಿಸುತ್ತಿದ್ದಾರೆ.


ಬಿಹಾರದ 40 ಲೋಕಸಭಾ ಕ್ಷೇತ್ರಗಳಲ್ಲಿ, ಬಿಜೆಪಿ ಮತ್ತು ಜನತಾ ದಳ (ಯುನಿಟ್) ಎರಡೂ ಪಕ್ಷಗಳು 17-17 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಉಳಿದ ಆರು ಕ್ಷೇತ್ರಗಳಲ್ಲಿ ಎಲ್ಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.