close

News WrapGet Handpicked Stories from our editors directly to your mailbox

ಮೇ 30ರಂದು ಸಂಜೆ 7 ಗಂಟೆಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ ಸ್ವೀಕಾರ

ಮೇ 30ರಂದು ಸಂಜೆ 7 ಗಂಟೆಗೆ ಪ್ರಧಾನಿಯಾಗಿ ನರೇಂದ್ರ ಮೋದಿ  ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Updated: May 26, 2019 , 06:20 PM IST
ಮೇ 30ರಂದು ಸಂಜೆ 7 ಗಂಟೆಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ ಸ್ವೀಕಾರ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ತಮ್ಮ ಸಂಸದೀಯ ಪಕ್ಷದ ನಾಯಕನಾಗಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಿದ ಬೆನ್ನಲ್ಲೇ, ಮೇ 30ರಂದು ಸಂಜೆ 7 ಗಂಟೆಗೆ ಪ್ರಧಾನಿಯಾಗಿ ನರೇಂದ್ರ ಮೋದಿ  ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಲಾಗಿದ್ದು, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಮೇ 30 ರಂದು ಸಂಜೆ 7 ಗಂಟೆಗೆ ಪ್ರಧಾನಮಂತ್ರಿ ಹಾಗೂ ಕೇಂದ್ರ ಸಚಿವ ಸಂಪುಟದ ಸದಸ್ಯರಿಗೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಮಾಣವಚನ ಬೋಧಿಸಲಿದ್ದಾರೆ.