ನವದೆಹಲಿ: ಜೂನ್ 21ರಂದು ನಡೆಯುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಈಗಿನಿಂದಲೇ ಸಿದ್ಧತೆ ನಡೆಸಿದ್ದು, 'ತಾಡಾಸನ'ದ ಅನಿಮೇಟೆಡ್ ವೀಡಿಯೋವನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ತಾಡಾಸನ ಅಥವಾ ಪರ್ವತ ಭಂಗಿಯಾಗಿರುವ ಈ ಯೋಗಾಸನದ ಅನಿಮೇಟೆಡ್ ವೀಡಿಯೊದಲ್ಲಿ ಯೋಗದ ಉಪಯೋಗಗಳ ಬಗ್ಗೆ ತಿಳಿಸಲಾಗಿದೆ. ಅಲ್ಲದೆ ಈ ಆಸನವನ್ನು ಹೇಗೆ ಮಾಡುವುದೆಂಬುದನ್ನು ಹಂತ ಹಂತವಾಗಿ ವಿವರಿಸಲಾಗಿದೆ. ಇದೇ ವೇಳೆ ವೀಡಿಯೋವನ್ನು ಟ್ವೀಟ್ ಮಾಡಿ, ಯೋಗವನ್ನು ನಿಮ್ಮ ಜೀವನದ ಭಾಗವನ್ನಾಗಿ ಮಾಡಿಕೊಂಡರೆ ಅನೇಕ ವಿಚಾರಗಳಿಗೆ ಸ್ಫೂರ್ತಿ ಪಡೆದುಕೊಳ್ಳಬಹುದು ಎಂದು ಮೋದಿ ತಿಳಿಸಿದ್ದಾರೆ. 



2014ರಲ್ಲಿ ಮೋದಿ ಯುಎಸ್ ಜನರಲ್ ಅಸೆಂಬ್ಲಿಯಲ್ಲಿ ಮಾತನಾಡುತ್ತ ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ದಿನದ ಉಲ್ಲೇಖ ಮಾಡಿದ್ದರು. ಅದಾದ ಬಳಿಕ ಜೂನ್ 21ನ್ನು ವಿಶ್ವ ಯೋಗ ದಿನವಾಗಿ ಆಚರಿಸಲು ಘೋಷಿಸಲಾಯಿತು. ಅಂದಿನಿಂದ ಇಂದಿನವರೆಗೆ ವಿಶ್ವಾದ್ಯಂತ ಯೋಗ ದಿನವನ್ನು ಆಚರಿಸಲಾಗುತ್ತಿದೆ.