ನವದೆಹಲಿ: ಲೋಕಸಭಾ ಚುನಾವಣೆಗೆ ಇಂದು 7 ರಾಜ್ಯಗಳ 59 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ದೆಹಲಿಯ ಔರಂಗಜೇಬ್ ಲೇನ್ನಲ್ಲಿರುವ ಎನ್ಪಿ ಸೀನಿಯರ್ ಸೆಕೆಂಡರಿ ಸ್ಕೂಲ್ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಬಳಿಕ ಸುದಿಗಾರರೊಂದಿಗೆ ಮಾತನಾಡಿದ ಅವರು, ನೋಟು ಅಮಾನ್ಯೀಕರಣ, ನಿರುದ್ಯೋಗ, ರೈತರ ಸಮಸ್ಯೆಗಳು, ಗಬ್ಬರ್ ಸಿಂಗ್ ಟ್ಯಾಕ್ಸ್ ಮತ್ತು ರಫೇಲ್ ಒಪ್ಪಂದದಲ್ಲಿನ ಭ್ರಷ್ಟಾಚಾರ ಸೇರಿದಂತೆ ಅನೇಕ ಪ್ರಮುಖ ಅಂಶಗಳ ವಿರುದ್ಧ ಈ ಚುನಾವಣೆಯಲ್ಲಿ ಹೋರಾಟ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರದಲ್ಲಿ ತಮ್ಮ ವಿರುದ್ಧ ದ್ವೇಷದ ಭಾಷಣವನ್ನು ಮಾಡಿ ಪ್ರಚಾರ ನಡೆಸಿದ್ದರೆ, ನಾವು ಪ್ರೀತಿ ಬಳಸಿದ್ದೇವೆ. ಹಾಗಾಗಿ ನಮಗೆ ಗೆಲ್ಲುವ ಭರವಸೆಯಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
Congress President Rahul Gandhi after casting his vote: The election was fought on key issues including demonetization, farmer problems, Gabbar Singh Tax and corruption in #Rafale. Narendra Modi used hatred in the campaign and we used love and I am confident love will win pic.twitter.com/gE1BgvQzPc
— ANI (@ANI) May 12, 2019