ನವದೆಹಲಿ: ಪ್ರಧಾನಿ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಬಿಎಸ್ಪಿ ಮಾಯಾವತಿ "ಚುನಾವಣೆಯಲ್ಲಿ ಗೆಲುವು ಸಾಧಿಸಲು ಮೋದಿ ಸರ್ಕಾರವು ಅಧಿಕಾರವನ್ನು ದುರೋಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. 


COMMERCIAL BREAK
SCROLL TO CONTINUE READING

ಪ್ರಧಾನಿ ಮೋದಿ ಉತ್ತರ ಪ್ರದೇಶದಲ್ಲಿ ಚುನಾವಣೆಯಲ್ಲಿ ಗೆಲ್ಲಲು ಎಸ್ಪಿ-ಬಿಎಸ್ಪಿ ಮೈತ್ರಿಕೂಟವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕಾಗಿ ಅವರು ಸರ್ಕಾರದ ಕಚೇರಿಗಳನ್ನು ದೂರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.ಉತ್ತರ ಪ್ರದೇಶದಲ್ಲಿ ಈಗಾಗಲೇ ನಾಲ್ಕು ಹಂತದ ಚುನಾವಣೆಯಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿಕೂಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಮೇ 23ಕ್ಕೆ  ಈ ಬಿಜೆಪಿ ಸರ್ಕಾರದ ಪತನವನ್ನು ಜನರು ನೋಡಲಿದ್ದಾರೆ ಎಂದರು.


ಪ್ರಧಾನಿ ರ್ಯಾಲಿ ಯೊಂದರಲ್ಲಿ ಭಾಷಣ ಮಾಡುತ್ತಾ ಮಾಯಾವತಿಯವರನ್ನು ಎಸ್ಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಬಳಸಿಕೊಂಡಿವೆ. ಅದು ಈಗ ಅವರಿಗೆ ತಿಳಿದಿದೆ ಎಂದಿದ್ದರು. ಇನ್ನು ಮುಂದುವರೆದು ಕಾಂಗ್ರೆಸ್ ಪಕ್ಷದ ಬಗ್ಗೆ ಬಿಎಸ್ಪಿ ಮುಕ್ತವಾಗಿ ಟೀಕಿಸುತ್ತಿದೆ.ಆದರೆ ಎಸ್ಪಿ ಕಾಂಗ್ರೆಸ್ ಬಗ್ಗೆ ಯಾವುದೇ ಚಕಾರವೆತ್ತುತ್ತಿಲ್ಲವೆಂದು ಹೇಳಿದ್ದರು.ಈ ಹಿನ್ನಲೆಯಲ್ಲಿ ಬಿಎಸ್ಪಿ ಮಾಯಾವತಿ ಬಿಜೆಪಿ ಮೈತ್ರಿಕೂಟವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದ್ದರು.