ನವದೆಹಲಿ: ದೇಶವು ಇಂದು 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ.  ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ಸತತ ಆರನೇ ಬಾರಿಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 


COMMERCIAL BREAK
SCROLL TO CONTINUE READING

ಈ ಬಾರಿ ಭಾರತೀಯ ವಾಯುಪಡೆಯ 3 ಮಹಿಳಾ ಅಧಿಕಾರಿಗಳು ಪಿಎಂ ಮೋದಿಯವರೊಂದಿಗೆ ಹಾಜರಾಗಲಿದ್ದಾರೆ. ಇದರಲ್ಲಿ ಫ್ಲೈಯಿಂಗ್ ಆಫೀಸರ್ ಪ್ರೀತಮ್ ಸಾಂಗ್ವಾನ್ ಅವರು ರಾಷ್ಟ್ರಧ್ವಜವನ್ನು ಹಾರಿಸಲು ಪಿಎಂ ಮೋದಿಗೆ ಸಹಾಯ ಮಾಡಲಿದ್ದರೆ, ಫ್ಲೈಟ್ ಲೆಫ್ಟಿನೆಂಟ್ ಜ್ಯೋತಿ ಯಾದವ್ ಮತ್ತು ಫ್ಲೈಟ್ ಲೆಫ್ಟಿನೆಂಟ್ ಮಾನ್ಸಿ ಗೆಡಾ ಅವರನ್ನು ಪಿಎಂ ಮೋದಿಯವರ ಎರಡೂ ಬದಿಗಳಲ್ಲಿ ನಿಯೋಜಿಸಲಾಗುವುದು.


ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರು ಬಾರಿ, ರಾಜೀವ್ ಗಾಂಧಿ ಮತ್ತು ಪಿ.ವಿ.ನರಸಿಂಹ ರಾವ್ ತಲಾ ಐದು ಬಾರಿ, ಮೊರಾರ್ಜಿ ದೇಸಾಯಿ ಎರಡು ಬಾರಿ ಮತ್ತು ಚೌಧರಿ ಚರಣ್ ಸಿಂಗ್, ವಿಶ್ವನಾಥ್ ಪ್ರತಾಪ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡ ಅವರು ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯಲ್ಲಿ ಒಮ್ಮೆ ತ್ರಿವರ್ಣ ಧ್ವಜವನ್ನು ಹಾರಿಸಿದ್ದಾರೆ.


ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಸತತ ಆರನೇ ಬಾರಿಗೆ ಕೆಂಪುಕೋಟೆಯಲ್ಲಿ ರಾಷ್ಟ್ರೀಯ ಧ್ವಜಾರೋಹಣ ಮಾಡಲಿದ್ದು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹಿಂದಿನ ದಾಖಲೆಯನ್ನು ಸರಿಗಟ್ಟಲಿದ್ದಾರೆ. ದೇಶವನ್ನುದ್ದೇಶಿಸಿ ಭಾಷಣ ಮಾಡುವ ವೇಳೆ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ತಮ್ಮ ಸರ್ಕಾರದ ಪ್ರಮುಖ ನಿರ್ಧಾರಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಧಾನಿ ಮೋದಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.


ಪ್ರಧಾನಿ ಮೋದಿ ಅವರ ಭಾಷಣವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಲಾಗುವುದು. ಸಮಾರಂಭದ ವಿಡಿಯೋ ಲೋಕಸಭಾ ಟಿವಿ, ರಾಜ್ಯಸಭಾ ಟಿವಿಯಲ್ಲಿ ಲಭ್ಯವಿರುತ್ತದೆ. ಪ್ರಧಾನಿ ಮೋದಿ ಅವರ ಭಾಷಣವನ್ನು ದೂರದರ್ಶನದ ಚಾನೆಲ್‌ನಲ್ಲಿ ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡಲಾಗುವುದು. ಈ ಪ್ರಸಾರ ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾಗಲಿದೆ.


ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಭದ್ರತಾಗಾಗಿ ಎನ್‌ಎಸ್‌ಜಿ ಮತ್ತು ಭಾರತೀಯ ವಾಯುಪಡೆಯ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿದೆ. ಕೆಂಪು ಕೋಟೆಯಲ್ಲಿ 250 ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. 170 ಕ್ಕೂ ಹೆಚ್ಚು ಕೈಟ್ ಕ್ಯಾಚರ್ಗಳನ್ನು ನಿಯೋಜಿಸಲಾಗಿದೆ. ಇದರಿಂದಾಗಿ ಯಾವುದೇ ಗಾಳಿಪಟ ಸ್ಥಳವನ್ನು ತಲುಪಲು ಸಾಧ್ಯವಾಗುವುದಿಲ್ಲ. ಪ್ರಧಾನಿ ಕೆಂಪು ಕೋಟೆಗೆ ಸಾಗುವ ಮಾರ್ಗದಲ್ಲಿ ಸಾವಿರಾರು ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ದೆಹಲಿ ಪೊಲೀಸ್ ಸೇನೆ ಎನ್‌ಎಸ್‌ಜಿ, ಅರೆಸೈನಿಕ ಎಸ್‌ಪಿಜಿಯನ್ನು ನಿಯೋಜಿಸಲಾಗಿದೆ. ಇದಲ್ಲದೆ, ಬಿಎಸ್ಎಫ್, ಸಿಐಎಸ್ಎಫ್, ಐಟಿಬಿಪಿ, ಸಿಆರ್ಪಿಎಫ್, ಭಾರತೀಯ ಸೇನೆ, ಮಿಲಿಟರಿ ಎಂಜಿನಿಯರಿಂಗ್, ರಕ್ಷಣಾ ಸಚಿವಾಲಯವೂ ಕೆಂಪು ಕೋಟೆಯ ಅಜೇಯ ಭದ್ರತೆಯ ಭಾಗವಾಗಲಿದೆ. ಕೆಂಪು ಕೋಟೆಯ ಸುತ್ತಮುತ್ತಲಿನ 300 ಮೇಲ್ಚಾವಣಿಯಲ್ಲಿ ಜವಾನರನ್ನು ನಿಯೋಜಿಸಲಾಗಿದೆ.