ನವದೆಹಲಿ: ಭಾರತದ ಅತಿದೊಡ್ಡ ಡ್ರೋನ್ ಹಬ್ಬವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟನೆ ಮಾಡಲಿದ್ದಾರೆ.ಜೊತೆಗೆ ರೈತ ಡ್ರೋನ್ ಪೈಲಟ್‌ಗಳ ಜೊತೆಗೆ ಸಂವಾದ ನಡೆಸಲಿದ್ದು, ಡ್ರೋನ್‌ ಹಾರಾಟವನ್ನೂ ಅವರು ವೀಕ್ಷಿಸಲಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : RSS ಮೆಚ್ಚಿಸಲು ಬಿಜೆಪಿ ಸರ್ಕಾರ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ: ಕಾಂಗ್ರೆಸ್


ಭಾರತ್‌ ಡ್ರೋನ್ ಮಹೋತ್ಸವ 2022 ಎರಡು ದಿನದ ಕಾರ್ಯಕ್ರಮವಾಗಿದ್ದು, ಮೇ 27 ಮತ್ತು 28 ರಂದು ನಡೆಯಲಿದೆ. ಮೇ 27 ರಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಧಾನಿ ಕಚೇರಿ ಪ್ರಕಟಣೆ ತಿಳಿಸಿದೆ.


ಈ ಕಾರ್ಯಕ್ರಮದಲ್ಲಿ ರೈತ ಡ್ರೋನ್ ಪೈಲಟ್‌ಗಳ ಜೊತೆಗೆ ಸಂವಾದ ನಡೆಸಲಿದ್ದಾರೆ, ಡ್ರೋನ್ ಹಾರಾಟದ ಪ್ರದರ್ಶನವನ್ನು ವೀಕ್ಷಿಸಲಿದ್ದಾರೆ ಮತ್ತು ಡ್ರೋನ್‌ ಪ್ರದರ್ಶನ ಕೇಂದ್ರದಲ್ಲಿ ಸ್ಟಾರ್ಟಪ್‌ಗಳ ಜೊತೆಗೆ ಸಂವಾದ ನಡೆಸಲಿದ್ದಾರೆ.ಸಿದ್ದರಾಮಯ್ಯ ಮತ್ತು ಡಿಕೆಶಿ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರೆ: ಬಿಜೆಪಿ ಟೀಕೆ


ಸರ್ಕಾರಿ ಅಧಿಕಾರಿಗಳು, ವಿದೇಶಿ ಪರಿಣಿತರು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು, ಸಾರ್ವಜನಿಕ ವಲಯದ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ಡ್ರೋನ್ ಸ್ಟಾರ್ಟಪ್‌ಗಳು ಸೇರಿದಂತೆ 1600 ನಿಯೋಗಗಳು ಈ ಹಬ್ಬದಲ್ಲಿ ಭಾಗವಹಿಸಲಿವೆ.70 ಕ್ಕೂ ಹೆಚ್ಚು ಪ್ರದರ್ಶನಕಾರರು ಪ್ರದರ್ಶನದಲ್ಲಿ ವಿವಿಧ ಬಳಕೆಯ ವಿಧಗಳನ್ನು ಪ್ರದರ್ಶಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


ಡ್ರೋನ್ ಪೈಲಟ್‌ ಪ್ರಮಾಣಪತ್ರಗಳು, ಉತ್ಪನ್ನ ಬಿಡುಗಡೆಗಳು, ಪ್ಯಾನೆಲ್ ಚರ್ಚೆಗಳು, ಹಾರಾಟ ಪ್ರದರ್ಶನಗಳು, ಭಾರತದಲ್ಲೇ ತಯಾರಿಸಿದ ಡ್ರೋನ್‌ ಟ್ಯಾಕ್ಸಿ ಪ್ರೊಟೊಟೈಪ್‌ ಪ್ರದರ್ಶನ ಈ ಮಹೋತ್ಸವದಲ್ಲಿ ಇರಲಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.