ಲೋಕಸಭೆ ಚುನಾವಣೆಯಲ್ಲಿ ಸೋತ ಬಳಿಕ ಪ್ರಧಾನಿ ಮೋದಿ ವಿದೇಶದಲ್ಲಿ ನೆಲೆಸಲಿದ್ದಾರೆ: ಲಾಲು ಪ್ರಸಾದ್ ಯಾದವ್
Lalu Prasad Yadav Slams Narendra Modi: ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿರುವ ಪ್ರಧಾನಿ ಮೋದಿಯವರು ದೇಶ ಬಿಡಲು ಯೋಚಿಸುತ್ತಿದ್ದಾರೆ. ಹೀಗಾಗಿಯೇ ಅವರು ಹಲವಾರು ದೇಶಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಲಾಲು ಪ್ರಸಾದ್ ಟೀಕಿಸಿದ್ದಾರೆ.
ಪಾಟ್ನಾ: ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿರುವ ಪ್ರಧಾನಿ ಮೋದಿ, ವಿದೇಶದಲ್ಲಿ ಆಶ್ರಯ ಪಡೆಯುವ ಬಗ್ಗೆ ಚಿಂತಿತರಾಗಿದ್ದಾರೆ ಎಂದು ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ವ್ಯಂಗ್ಯವಾಡಿದ್ದಾರೆ.
ಕೆಲವು ದಿನಗಳ ಹಿಂದೆ ಮೋದಿಯವರು ಮಾಡಿದ್ದ "ಕ್ವಿಟ್ ಇಂಡಿಯಾ" ಜೋಕ್‍ಗೆ ಲಾಲು ಯಾದವ್ ತಿರುಗೇಟು ನೀಡಿದ್ದಾರೆ. ಹೊಸ ಮೈತ್ರಿಕೂಟ ‘India’ವನ್ನು ರೂಪಿಸಿರುವ ವಿಪಕ್ಷಗಳು ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ತುಷ್ಟೀಕರಣದ ರಾಜಕೀಯ ಮಾಡುತ್ತಿವೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆ ವಿರುದ್ಧ ಲಾಲು ಯಾದವ್ ಕಿಡಿಕಾರಿದ್ದಾರೆ.
ಇದನ್ನೂ ಓದಿ: ವೈರಲ್ ವಿಡಿಯೋ: 6 ಅಡಿ ಹಾವನ್ನು ಲುಂಗಿಯಲ್ಲಿ ಹಾಕಿಕೊಂಡ ವ್ಯಕ್ತಿ.. ಮುಂದೆ ನೋಡಿ ನಗು ತಡೆಯೋಕೆ ಆಗಲ್ಲ!
‘ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿರುವ ಪ್ರಧಾನಿ ಮೋದಿಯವರು ದೇಶ ಬಿಡಲು ಯೋಚಿಸುತ್ತಿದ್ದಾರೆ. ಹೀಗಾಗಿಯೇ ಅವರು ಹಲವಾರು ದೇಶಗಳಿಗೆ ಭೇಟಿ ನೀಡುತ್ತಿದ್ದಾರೆ. ಪಿಜ್ಜಾ, ಮೊಮೊಸ್ ಮತ್ತು ಚೌಮಿನ್ ಸವಿಯಲು ಉತ್ತಮ ಸ್ಥಳಗಳನ್ನು ಹುಡುಕುತ್ತಿದ್ದಾರೆ ಎಂದು ಲಾಲು ಪ್ರಸಾದ್ ಟೀಕಸಿದ್ದಾರೆ.
ಆಗಸ್ಟ್ ತಿಂಗಳು ಮುಂಬೈನಲ್ಲಿ ನಡೆಯಲಿರುವ ‘India’ದ ಮುಂದಿನ ಸಭೆಯನ್ನು ನಾನು ಎದುರು ನೋಡುತ್ತಿದ್ದೇನೆ. ಈ ಸಭೆಯಲ್ಲಿ ತಮ್ಮ ಪ್ರತಿಸ್ಪರ್ಧಿ ಬಿಹಾರ ಸಿಎಂ ನಿತೀಶ್ ಕುಮಾರ್ ಅವರೊಂದಿಗೆ ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ: ನಾಯಿಯಾದ ಮಾನವ... ಈತ ಪ್ರಾಣಿಯಂತೆ ಕಾಣಲು ಮಾಡಿದ ಖರ್ಚಿಗೆ ಒಂದು ಮನೆ ಕಟ್ಟಬಹುದಿತ್ತು...!
‘ನಾವು ಒಗ್ಗಟ್ಟನ್ನು ಉಳಿಸಿಕೊಳ್ಳುವ ಮೂಲಕ ಬಿಜೆಪಿಯನ್ನು ಸೋಲಿಸಬೇಕು. ಪ್ರಧಾನಿ ಮೋದಿ ಸಂವಿಧಾನವನ್ನು ಬುಡಮೇಲು ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಾವು ಅವರ ಈ ಪ್ರಯತ್ನವನ್ನು ವಿಫಲಗೊಳಿಸುತ್ತೇವೆ. ಮಣಿಪುರದಲ್ಲಿ ನಡೆಯುತ್ತಿರುವ ಕಲಹಕ್ಕೆ ಕೇಂದ್ರ ಸರ್ಕಾರವೇ ನೇರ ಕಾರಣ’ವೆಂದು ಅವರು ಆರೋಪಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.