ನವದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.


COMMERCIAL BREAK
SCROLL TO CONTINUE READING

"ನಮ್ಮ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಆ ದೇವರು ಆಯಸ್ಸು ಮತ್ತು ಉತ್ತಮ ಆರೋಗ್ಯ ನೀಡಲೆಂದು ಪ್ರಾರ್ಥಿಸುತ್ತೇನೆ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. 



ಮಾಜಿ ಪ್ರಧಾನಿ ದೇವೇಗೌಡರು 87 ನೇ ವಸಂತಕ್ಕೆ ಕಾಲಿಟ್ಟಿದ್ದು, ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸದ್ಯ ಕುಟುಂಬ ಸಮೇತ ಆಂಧ್ರ ಪ್ರದೇಶದ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ತೆರಳಿದ್ದಾರೆ.