ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿ ನೇತೃತ್ವದ NDA ಸರ್ಕಾರ ಶೀಘ್ರವೇ ಪತನವಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಶನಿವಾರ ಮಾತನಾಡಿರುವ ಅವರು, ಪ್ರಧಾನಿ ಮೋದಿಯವರ 3.O ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು, ಕಾದು ನೋಡೋಣ ಅಂತಾ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ದೇಶದ ಮತದಾರರು ಬಹುಮತದ ಸರ್ಕಾರವನ್ನು ಆಯ್ಕೆ ಮಾಡಿಲ್ಲ. ಆಕಸ್ಮಿಕವಾಗಿ ಬಿಜೆಪಿ ನೇತೃತ್ವದಲ್ಲಿ NDA ಮೈತ್ರಿಕೂಟವು ಸರ್ಕಾರ ರಚಿಸಿದೆ. ಹೀಗಾಗಿ ಅದು ಯಾವಾಗ ಬೇಕಾದರೂ ಬೀಳಬಹುದು ಅಂತಾ ಖಾಸಗಿ ಟಿವಿಗೆ ನೀಡಿದ ಸಂದರ್ಶನದಲ್ಲಿ ಖರ್ಗೆ ಹೇಳಿದ್ದಾರೆ. 


ಇದನ್ನೂ ಓದಿ: ನಿರ್ಮಲಾ ಸೀತಾರಾಮನ್ ನೇತೃತ್ವದ ಜಿಎಸ್‌ಟಿ ಕೌನ್ಸಿಲ್ ಜೂನ್ 22ರಂದು ಆರಂಭ


ಪ್ರಧಾನಿ ಮೋದಿಯವರೇ ಈ ಹಿಂದೆ ಹಲವಾರು ಬಾರಿ ಹೇಳಿದ್ದರು. ʼಖಚಡಿ ಸರ್ಕಾರʼ ಬಹುಮತ ಇಲ್ಲದಿದ್ದರೆ ಅದು ಯಾವಾಗ ಬೇಕಾದರೂ ಬೀಳಬಹುದು. ಬಹುಮತವಿಲ್ಲದಿದ್ದರೆ ಅವರು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಇವು ಅವರೇ ಹೇಳಿದ ಮಾತುಗಳು. ನಾನು ಅದೇ ವಿಷಯವನ್ನು ಪುನರಾವರ್ತಿಸುತ್ತಿದ್ದೇನೆ ಎಂದು ಖರ್ಗೆ ಮೋದಿಗೆ ಟಾಂಗ್‌ ನೀಡಿದ್ದಾರೆ. 


ಇದೇ ವೇಳೆ ಖರ್ಗೆಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಜೆಡಿಯು ನಾಯಕ ಕೆಸಿ ತ್ಯಾಗಿ, ಕಾಂಗ್ರೆಸ್ ಮುಖ್ಯಸ್ಥರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲಕ ಅರಾಜಕತೆ ಮತ್ತು ಅವಿಶ್ವಾಸದ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ. ನಾನು ಇದನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.   


ಇದನ್ನೂ ಓದಿKuwait Fire Tragedy: ಕೊಚ್ಚಿ ತಲುಪಿದ 45 ಭಾರತೀಯರ ಮೃತದೇಹ ಹೊತ್ತ ಐಎಎಫ್ ವಿಮಾನ


ಈ ಬಾರಿಯ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬಾರದ ಹಿನ್ನೆಲೆ ಅದು NDA ಮಿತ್ರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿದೆ. ಈ ಮೂಲಕ ಸತತ 3ನೇ ಬಾರಿಗೆ ಮೋದಿಯವರು ಪ್ರಧಾನಿಯೂ ಆಗಿದ್ದಾರೆ. ಬಿಜೆಪಿಗೆ ಬಹುಮತ ಬಾರದ ಕಾರಣ ಸರ್ಕಾರ ರಚನೆಗೆ ಇಂಡಿಯಾ ಮೈತ್ರಿಕೂಟವೂ ಸಹ ಹರಸಾಹಸಪಡುತ್ತಿದೆ. ಟಿಡಿಪಿ ಮತ್ತ ಜೆಡಿಯು NDAಗೆ ಬೆಂಬಲ ನೀಡಿದ್ದಕ್ಕೆ ಈ 2 ಪಾರ್ಟಿಗಳು ಕೇಂದ್ರ ಸರ್ಕಾರ ರಚನೆಗೆ ಕಿಂಗ್​​​ ಮೇಕರ್ ಆಗಿ ಹೊರಹೊಮ್ಮಿವೆ. ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ಸಹ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದು, ಕೇವಲ 15 ದಿನಗಳಲ್ಲೇ NDA ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಅಂತಾ ಹೇಳಿದ್ದರು.  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.