ನವದೆಹಲಿ: ಪಂಜಾಬ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತೆ ವಿಚಾರಕ್ಕೆ ಸಂಬಂಧಿಸಿದ ವಿವಾದ ನಿಲ್ಲುವ ಲಕ್ಷಣ ತಕ್ಷಣಕ್ಕೆ ಕಾಣುತ್ತಿಲ್ಲ. ಈ ಪ್ರಕರಣದಲ್ಲಿ ಜನವರಿ 6 ರಂದು ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯ ಕುಲ್ಗರಿ ಪೊಲೀಸ್ ಠಾಣೆಯಲ್ಲಿ 150 ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 283 (ಸಾರ್ವಜನಿಕ ರಸ್ತೆ ಅಥವಾ ನ್ಯಾವಿಗೇಷನ್ ಲೈನ್‌ಗೆ ಅಪಾಯ ಅಥವಾ ಅಡಚಣೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಶುಕ್ರವಾರದಂದು ಸುಪ್ರೀಂ ಕೋರ್ಟ್‌ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಎನ್ ವಿ ರಮಣ ನೇತೃತ್ವದ ಪೀಠ ವಿಚಾರಣೆ ನಡೆಸಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್‌ಗೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸಂವಹನ ದಾಖಲೆಗಳು / ಸಾಕ್ಷ್ಯಗಳನ್ನು ತಕ್ಷಣವೇ ಸಂರಕ್ಷಿಸುವಂತೆ ನಿರ್ದೇಶಿಸಿದೆ.
ಈ ಸಲುವಾಗಿ ಲಾಯರ್ಸ್ ವಾಯ್ಸ್ ಎಂಬ ಎನ್‌ಜಿಓ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರಧಾನ ಮಂತ್ರಿಯ ಭದ್ರತೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ರಿಜಿಸ್ಟ್ರಾರ್‌ಗೆ ನೀಡುವಂತೆ ಎಲ್ಲಾ ಏಜೆನ್ಸಿಗಳನ್ನು ಕೇಳಿದೆ. ಇದೀಗ ಈ ಪ್ರಕರಣದ ಮುಂದಿನ ವಿಚಾರಣೆ ಸೋಮವಾರ ನಡೆಯಲಿದೆ. ಇದರೊಂದಿಗೆ ಸೋಮವಾರದವರೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಎರಡೂ ಸಮಿತಿಗಳ ತನಿಖೆಗೆ ತಡೆ ನೀಡಲಾಗಿದೆ.
ಇದನ್ನೂ ಓದಿ- Covid-19: ಕರೋನಾ ಪಾಸಿಟಿವ್ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದ ನಂತರ ಪರೀಕ್ಷೆ ಅಗತ್ಯವಿದೆಯೇ ಅಥವಾ ಇಲ್ಲವೇ? ಸತ್ಯೇಂದ್ರ ಜೈನ್ ಹೇಳಿದ್ದೇನು ಗೊತ್ತಾ
ಅರ್ಜಿದಾರರ ಪರ ವಕೀಲ ಮಣಿಂದರ್ ಸಿಂಗ್ ಅವರು ವಾದ ಮಂಡಿಸಿ, ಪ್ರಧಾನಿ ಅವರು ಬಯಸಿದ್ದರೂ ಸಹ ಎಸ್‌ಪಿಜಿಯ ಭದ್ರತಾ ವಲಯದಿಂದ ಹೊರಗೆ ಹೋಗುವಂತಿಲ್ಲ. ಇದು ಕೇವಲ ಕಾನೂನು ಮತ್ತು ಸುವ್ಯವಸ್ಥೆಯ ವಿಷಯವಲ್ಲ, ಇದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯವಾಗಿದೆ ಎಂದು ಹೇಳಿದರು. ಯಾವುದೇ ಸಂದರ್ಭದಲ್ಲೂ ಪ್ರಧಾನಿ ಬೆಂಗಾವಲು ಪಡೆ 20 ನಿಮಿಷಗಳ ಕಾಲ ನಿಲ್ಲುವಂತಿಲ್ಲ.
ಈ ವಿಚಾರದಲ್ಲಿ ಉನ್ನತ ಮಟ್ಟದ ತನಿಖೆಯಾಗಬೇಕು, ಆದರೆ ಈ ತನಿಖೆ ರಾಜ್ಯದ ಕಡೆಯಿಂದ ಆಗಬಾರದು ಎಂದು ಹೇಳಿದರು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷ್ಯಗಳನ್ನು ಭದ್ರಪಡಿಸಬೇಕು ಮತ್ತು ಭವಿಷ್ಯದಲ್ಲಿ ಇದು ಸಂಭವಿಸಲಾರದಂತೆ ನೋಡಿಕೊಳ್ಳಬೇಕು, . ಈ ಬಗ್ಗೆ ತನಿಖೆ ನಡೆಸುವ ಅಧಿಕಾರ ರಾಜ್ಯಕ್ಕೆ ಇಲ್ಲ, ಬಟಿಂಡಾದಿಂದ ಫಿರೋಜ್‌ಪುರದವರೆಗಿನ ಸಾಕ್ಷ್ಯಗಳನ್ನು ಬಟಿಂಡಾದ ಸ್ಥಳೀಯ ನ್ಯಾಯಾಲಯವು ರಕ್ಷಿಸುವ ಜವಾಬ್ದಾರಿ ವಹಿಸಿಕೊಳ್ಳಬೇಕು ಮತ್ತು ಈ ವಿಷಯದಲ್ಲಿ ಎನ್‌ಐಎ ತನಿಖೆ ನಡೆಸಬೇಕು ಎಂದು ಕೇಳಿಕೊಂಡರು.
ಈ ಕುರಿತು ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ತುಷಾರ್ ಮೆಹ್ತಾ ಅವರು ಇದೊಂದು ಅಪರೂಪದ ಪ್ರಕರಣವಾಗಿದ್ದು ಈ ಪ್ರಕರಣದ ತನಿಖೆಯಲ್ಲಿ ಎನ್‌ಐಎ ಭಾಗಿಯಾಗಬೇಕು. ಇದು ಕೇವಲ ರಾಜ್ಯದ ವಿಷಯವಲ್ಲ. ಅಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಇತ್ತು, ಆ ಪೋಲಿಸರು ಪ್ರತಿಭಟನಾಕಾರರೊಂದಿಗೆ ಚಹಾ ಕುಡಿಯುತ್ತಿದ್ದರು ಎಂದು ಸಾಲಿಸಿಟಿ ಜನರಲ್ ಹೇಳಿದರು. ಪ್ರಧಾನಿ ಬೆಂಗಾವಲು ಪಡೆಗಿಂತ 500 ಮೀಟರ್ ಮುಂದೆ ಸಾಗುತ್ತಿದ್ದ ಎಚ್ಚರಿಕೆಯ ಕಾರಿಗೆ ಅಲ್ಲಿ ಪ್ರತಿಭಟನಾಕಾರರು ಇದ್ದಾರೆ ಎಂಬ ಎಚ್ಚರಿಕೆಯನ್ನೂ ನೀಡಿಲ್ಲ. ಫ್ಲೈಓವರ್ ಮೇಲೆ ಪ್ರಧಾನಿಗಳನ್ನು ತಡೆದಿದ್ದಾರೆ, ಇದು ಗಡಿಯಾಚೆಗಿನ ಭಯೋತ್ಪಾದನೆಯ ಪ್ರಕರಣವಾಗಿರಬಹುದು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು.
ಇದನ್ನೂ ಓದಿ- ಜೈಲಿಗೆ ಹಾಕಿದ್ರು ಪರವಾಗಿಲ್ಲ, ಪಾದಯಾತ್ರೆ ಮಾಡಿಯೇ ತೀರುತ್ತೇವೆ: ಡಿ.ಕೆ.ಶಿವಕುಮಾರ್
ಪಂಜಾಬ್ ಸರ್ಕಾರದ ವಾದ:
ಪಂಜಾಬ್ ಸರ್ಕಾರದ ಪರ ವಾದ ಮಂಡಿಸಿದ ಪಂಜಾಬ್‌ನ ಅಡ್ವೊಕೇಟ್ ಜನರಲ್ ಡಿ ಎಸ್ ಪಾಟ್ವಾಲಿಯ; ರಾಜ್ಯ ಸರ್ಕಾರವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಮತ್ತು ಕೂಡಲೇ ಸರ್ಕಾರ ಈ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಿದೆ, ಒಂದು ವೇಳೆ ನ್ಯಾಯಾಲಯವು ಸಮಿತಿಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡುವುದಾದರೇ ರಾಜ್ಯ ಸರ್ಕಾರಕ್ಕೆ ಅದರ ಬಗ್ಗೆ ಯಾವುದೇ ಅಭ್ಯಂತರವಿಲ್ಲ. ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳು ವಿಚಾರಣೆ ನಡೆಸಿದರೂ ನಮ್ಮ ಅಭ್ಯಂತರವಿಲ್ಲ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.