ನವದೆಹಲಿ : ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಿಂದ(Ukraine Russia War) ವಿಶ್ವದಾದ್ಯಂತ ದೇಶಗಳು ತಲ್ಲಣಗೊಂಡಿವೆ. ಭಾರತ ಸೇರಿದಂತೆ ಹೆಚ್ಚಿನ ದೇಶಗಳು ಉಕ್ರೇನ್‌ನಿಂದ ತಮ್ಮ ನಾಗರಿಕರನ್ನು ಸುರಕ್ಷಿತವಾಗಿ ಮರಳಿ ಕರೆತರಲು ತೊಡಗಿವೆ. ಉಕ್ರೇನ್ ಬಿಕ್ಕಟ್ಟಿನ ಕುರಿತು ಸತತ ಎರಡನೇ ದಿನವದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಉನ್ನತ ಅಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿರುತ್ತಾರೆ.


COMMERCIAL BREAK
SCROLL TO CONTINUE READING

ಪ್ರಧಾನಿ ಮೋದಿಯವರ ಸಭೆಗಳು


ಇದಕ್ಕೂ ಮುನ್ನ ಭಾನುವಾರವೂ ಪ್ರಧಾನಿ ಮೋದಿ(Narendra Modi) ಅವರು ಉನ್ನತ ಮಟ್ಟದ ಸಭೆ ನಡೆಸುವ ಮೂಲಕ ಪರಿಸ್ಥಿತಿಯನ್ನು ಅವಲೋಕಿಸಿದರು. ಈ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್, ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಎನ್ಎಸ್ಎ ಅಜಿತ್ ದೋವಲ್ ಉಪಸ್ಥಿತರಿದ್ದರು. ಸಭೆಯು ಉಕ್ರೇನ್‌ನಿಂದ ಭಾರತೀಯರ ಸುರಕ್ಷಿತವಾಗಿ ಮರಳಿ ಕರೆತರುವ  ಪ್ರಯತ್ನಗಳನ್ನು ಪರಿಶೀಲಿಸಿದರು ಮತ್ತು ಪ್ರಯತ್ನಗಳನ್ನು ತೀವ್ರಗೊಳಿಸುವ ಬಗ್ಗೆ ಒತ್ತು ನೀಡಿದರು.


ಇದನ್ನೂ ಓದಿ : ಎಸ್‌ಪಿ ಅಧಿಕಾರಕ್ಕೆ ಬಂದರೆ ಒಂದೇ ಜಾತಿ, ಧರ್ಮದ ಪರವಾಗಿ ಕೆಲಸ ಮಾಡಲಿದೆ-ಅಮಿತ್ ಶಾ


ಸುಮಾರು 20 ಸಾವಿರ ಭಾರತೀಯ ನಾಗರಿಕರು ಉಕ್ರೇನ್‌(Ukraine)ನಲ್ಲಿ ಸಿಲುಕಿಕೊಂಡಿದ್ದಾರೆ, ಹೆಚ್ಚಾಗಿ ವೈದ್ಯಕೀಯ ವಿದ್ಯಾರ್ಥಿಗಳು. ಈ ನಾಗರಿಕರ ಸುರಕ್ಷತೆ ಭಾರತಕ್ಕೆ ಮುಖ್ಯವಾಗಿದೆ. ಉಕ್ರೇನ್‌ನ ನೆರೆಯ ರಾಷ್ಟ್ರಗಳಾದ ರೊಮೇನಿಯಾ ಮತ್ತು ಪೋಲೆಂಡ್‌ ಮೂಲಕ ಸರ್ಕಾರ ತನ್ನ ಜನರನ್ನು ಸ್ಥಳಾಂತರಿಸಲು ಇದು ಕಾರಣವಾಗಿದೆ. ಆದರೆ ಉಕ್ರೇನ್ ಮೇಲೆ ರಷ್ಯಾದ ದಾಳಿಯಿಂದಾಗಿ ಈ ಎಲ್ಲ ಸಮಸ್ಯೆಗಳು ಎದುರಿಸುವಂತಾಗಿದೆ.


ಭಾರತೀಯರನ್ನ ಮರಳಿ ಸುರಕ್ಷಿತವಾಗಿ ಕರೆತರುವುದೇ ಮುಖ್ಯ ಉದ್ದೇಶ


ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತೀಯ ನಾಗರಿಕರನ್ನು ಸ್ಥಕರೆತರುವುದು ಸರ್ಕಾರದ ಆದ್ಯತೆಯಾಗಿದೆ ಮತ್ತು ಈ ದಿಕ್ಕಿನಲ್ಲಿ ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ(Ministry of External Affairs)ದ ಪ್ರಕಾರ, ಇದುವರೆಗೆ ಸುಮಾರು 1400 ಭಾರತೀಯರು ಉಕ್ರೇನ್‌ನಿಂದ ಸ್ವದೇಶಕ್ಕೆ ಮರಳಿದ್ದಾರೆ. ಇದಕ್ಕಾಗಿ ಸರ್ಕಾರ ‘ಆಪರೇಷನ್ ಗಂಗಾ’ ನಡೆಸಿದ್ದು, ಇದರ ಅಡಿಯಲ್ಲಿ ಭಾರತೀಯರನ್ನು ಹೊತ್ತ 6 ವಿಮಾನಗಳು ಸ್ವದೇಶಕ್ಕೆ ಮರಳಿವೆ.


ಇದನ್ನೂ ಓದಿ : ಉಕ್ರೇನ್ ವಿಷಯದಲ್ಲಿ ಭಾರತ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿರುವುದೇಕೆ?


ಇದಲ್ಲದೇ, ಪ್ರಧಾನಿ ಮೋದಿ(PM Modi) ಕರೆದ ಸಭೆಯ ನಂತರ, ಕೇಂದ್ರ ಸರ್ಕಾರದ ಮಂತ್ರಿಗಳು ಉಕ್ರೇನ್‌ನ ನೆರೆಯ ದೇಶಗಳಿಗೂ ತೆರಳಿ ಭಾರತೀಯರನ್ನು ಸ್ಥಳಾಂತರಿಸುವಲ್ಲಿ ರಾಯಭಾರ ಕಚೇರಿ ಮತ್ತು ಸ್ಥಳೀಯ ಸರ್ಕಾರಕ್ಕೆ ಸಹಾಯ ಮಾಡಲು ನಿರ್ಧರಿಸಲಾಯಿತು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ