ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತ್ಯಸಂಸ್ಕಾರ ಇಂದು ಸಂಜೆ 4 ಗಂಟೆಗೆ ನಡೆಯಲಿದ್ದು, ಪಾರ್ಥಿವ ಶರೀರದ ಮೆರವಣಿಗೆ ರಾಜ್ ಘಾಟ್ ಬಳಿಯಿರುವ ರಾಷ್ಟ್ರೀಯ ಸ್ಮೃತಿ ಸ್ಥಳದತ್ತ ಸಾಗಿದೆ. 


COMMERCIAL BREAK
SCROLL TO CONTINUE READING

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಸೇರಿದಂತೆ ಕೇಂದ್ರ ಸಚಿವ ಸಂಪುಟದ ಅನೇಕ ಸಚಿವರು ಮತ್ತು ಬಿಜೆಪಿ ನಾಯಕರೊಂದಿಗೆ ಲಕ್ಷಾಂತರ ಅಭಿಮಾನಿಗಳು ಮೆರವಣಿಗೆಯಲ್ಲಿ ನಡೆದುಕೊಂಡೇ ಸಾಗಿದ್ದಾರೆ. ಈ ಮೂಲಕ ಅಂತಿಮ ಯಾತ್ರೆಯಲ್ಲಿ ತಮ್ಮ ನೆಚ್ಚಿನ ಗುರುವಿಗೆ ನಮನ ಸಲ್ಲಿಸಿದರು. 



ಅಟಲ್ ಬಿಹಾರಿ ವಾಜಪೇಯಿ ಅವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ದೇಶದ ಮೂಳೆ ಮೂಲೆಗಳಿಂದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಆಗಮಿಸಿದ್ದು, 'ಅಟಲ್ ಅಮರ್ ರಹೇ', 'ಅಟಲ್ ಜೀ ಜಿಂದಾಬಾದ್' ಎಂಬ ಘೋಷಣೆಗಳನ್ನು ಕೂಗಿದರು. ಇನ್ನೇನು ಕೆಲವೇ ಕ್ಷಣಗಳಲ್ಲಿ ಅಟಲ್ ಜೀ ಪಾರ್ಥಿವ ಶರೀರ ಸ್ಮೃತಿ ಸ್ಥಳ ತಲುಪಲಿದ್ದು, ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಅಂತ್ಯಸಂಸ್ಕಾರ ನೆರವೇರಲಿದೆ. 



ಕಳೆದ 2 ತಿಂಗಳುಗಳಿಂದ ಕಿಡ್ನಿ ಮತ್ತು ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಆಗಸ್ಟ್ 16ರಂದು ಸಂಜೆ ದೆಹಲಿಯ ಇಎಮ್ಎಸ್ ಆಸ್ಪತ್ರೆಯಲ್ಲಿ ನಿಧನರಾದರು.