ಮಹಾ' ಬಿಕ್ಕಟ್ಟು: ಸುಪ್ರೀಂ ತೀರ್ಪಿನ ಹಿನ್ನಲೆ ಅಮಿತ್ ಶಾ, ಪ್ರಧಾನಿ ಮೋದಿ ಸಭೆ

ಮಹಾರಾಷ್ಟ್ರದ ರಾಜಕೀಯ ಪರಿಸ್ಥಿತಿ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಇಂದು ಬೆಳಿಗ್ಗೆ ಸಂಸತ್ತಿನೊಳಗೆ ಭೇಟಿಯಾದರು ಎನ್ನಲಾಗಿದೆ.

Last Updated : Nov 26, 2019, 03:09 PM IST
ಮಹಾ' ಬಿಕ್ಕಟ್ಟು: ಸುಪ್ರೀಂ ತೀರ್ಪಿನ ಹಿನ್ನಲೆ ಅಮಿತ್ ಶಾ, ಪ್ರಧಾನಿ ಮೋದಿ ಸಭೆ   title=

ನವದೆಹಲಿ: ಮಹಾರಾಷ್ಟ್ರದ ರಾಜಕೀಯ ಪರಿಸ್ಥಿತಿ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಇಂದು ಬೆಳಿಗ್ಗೆ ಸಂಸತ್ತಿನೊಳಗೆ ಭೇಟಿಯಾದರು ಎನ್ನಲಾಗಿದೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಮುಂದಿನ ಕ್ರಮದ ಬಗ್ಗೆ ಇಬ್ಬರೂ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಬ್ಬರು ಯಾವ ನಿರ್ಧಾರವನ್ನು ತಲುಪಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲವಾದರೂ, ಅದನ್ನು ಫಡ್ನವಿಸ್ ಅವರಿಗೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸುಪ್ರೀಂಕೋರ್ಟ್ ತೀರ್ಪಿನ ನಂತರ ಇಂದು ಮಧ್ಯಾಹ್ನ 3.30 ಕ್ಕೆ ಮುಖ್ಯಮಂತ್ರಿ ಫಡ್ನವೀಸ್ ಪತ್ರಿಕಾಗೋಷ್ಠಿಗೆ ಕರೆ ನೀಡಿದ್ದಾರೆ. ಇಂದು ಬೆಳಗ್ಗೆ ಬಿಜೆಪಿಯ ಅಚ್ಚರಿಯ ಸರ್ಕಾರ ರಚನೆ ನಡೆಯನ್ನು ಪ್ರಶ್ನಿಸಿ ಶಿವಸೇನೆ-ಕಾಂಗ್ರೆಸ್-ಎನ್‌ಸಿಪಿ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸ್ಪಂದಿಸಿದ ಸುಪ್ರೀಂಕೋರ್ಟ್, ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸದನ ಪರೀಕ್ಷೆಗೆ ಆದೇಶಿಸಿದೆ. ನಾಳೆ ಸಂಜೆ ರಾಜ್ಯದ 288 ಶಾಸಕರಿಗೆ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಇದು ನಡೆಯಲಿದೆ.

ಶನಿವಾರ ಬಿಜೆಪಿಯನ್ನು ಬೆಂಬಲಿಸುವಲ್ಲಿ ಪ್ರತ್ಯೇಕ ಬಣವನ್ನು ಮುನ್ನಡೆಸಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಎನ್‌ಸಿಪಿ ನಾಯಕ ಅಜಿತ್ ಪವಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
 

Trending News