ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದರು. ಈ ಶುಭ ಸಂದರ್ಭದಲ್ಲಿ ಪಿಎಂ ಮೋದಿ ಸೈನಿಕರಿಗೆ ಸಿಹಿ ತಿಂಡಿಗಳನ್ನು ವಿತರಿಸಿದರು.



COMMERCIAL BREAK
SCROLL TO CONTINUE READING

ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ರಾಜೌರಿಗೆ ಆಗಮಿಸಿದ ಪ್ರಧಾನಿ ಮೋದಿ ಮತ್ತು ಆಗಸ್ಟ್ 5 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370 ನೇ ವಿಧಿಯನ್ನು ರದ್ದುಗೊಳಿಸಲು ಕೇಂದ್ರ ನಿರ್ಧರಿಸಿದ ನಂತರ ಇದೇ ಮೊದಲ ಬಾರಿಗೆ ಅವರು ಕಾಶ್ಮೀರ ಕಣಿವೆಗೆ ಭೇಟಿ ನೀಡಿದ್ದಾರೆ.


ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದಾಗಿನಿಂದಲೂ ಕಳೆದ ಆರು ವರ್ಷದಿಂದ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನಿಕರೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸುತ್ತಿದ್ದಾರೆ. 2014 ರಲ್ಲಿ ಪ್ರಧಾನಿ ಮೋದಿ ತಮ್ಮ ದೀಪಾವಳಿಯನ್ನು ಲಡಾಖ್ ಪ್ರದೇಶದ ಸಿಯಾಚೆನ್‌ನಲ್ಲಿ ಜವಾನರೊಂದಿಗೆ ಆಚರಿಸಿದ್ದಲ್ಲದೆ, ಶ್ರೀನಗರದಲ್ಲಿ ಪ್ರವಾಹ ಪೀಡಿತರನ್ನು ಭೇಟಿ ಮಾಡಿದ್ದರು.