Ganesh Chaturthi: ದೇಶದ ಜನತೆಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಸೇರಿ ಗಣ್ಯರ ಶುಭಾಶಯ

ಗಣೇಶ ಚತುರ್ಥಿ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಸಿಎಂ ಬಸವರಾಜ್ ಬೊಮ್ಮಾಯಿ ಸೇರಿ ಹಲವು ಗಣ್ಯರು ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ.

Written by - Puttaraj K Alur | Last Updated : Aug 31, 2022, 10:21 AM IST
  • ಗಣೇಶನ ಆಶೀರ್ವಾದದಿಂದ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ಹರಡಲಿ- ರಾಷ್ಟ್ರಪತಿ ಮುರ್ಮು
  • ಗಣೇಶ ದೇವರ ಆಶೀರ್ವಾದ ಸದಾ ನಮ್ಮ ಮೇಲಿರಲಿ – ಪ್ರಧಾನಿ ನರೇಂದ್ರ ಮೋದಿ
  • ವಿಘ್ನ ನಿವಾರಕ ಎಲ್ಲರ ಇಷ್ಟಾರ್ಥಗಳನ್ನು ಈಡೇರಿಸಿ, ಸುಖ-ಶಾಂತಿ, ಸಮೃದ್ಧಿ ನೆಲೆಸಲು ಶಕ್ತಿ ನೀಡಲಿ- ಸಿಎಂ ಬೊಮ್ಮಾಯಿ
Ganesh Chaturthi: ದೇಶದ ಜನತೆಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಸೇರಿ ಗಣ್ಯರ ಶುಭಾಶಯ title=
Ganesh Chaturthi 2022

ನವದೆಹಲಿ: ಕರ್ನಾಟಕ ಸೇರಿದಂತೆ ದೇಶದಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಗಣೇಶ ಚತುರ್ಥಿ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಸಿಎಂ ಬಸವರಾಜ್ ಬೊಮ್ಮಾಯಿ ಸೇರಿ ಹಲವು ಗಣ್ಯರು ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ.

‘ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ವಿಘ್ನ ನಿವಾರಕ ಮತ್ತು ಮಂಗಳಮೂರ್ತಿ ಗಣೇಶನು ಜ್ಞಾನ, ಸಾಧನೆ ಮತ್ತು ಅದೃಷ್ಟದ ಸಂಕೇತಗಳಾಗಿದೆ. ಶ್ರೀ ಗಣೇಶನ ಆಶೀರ್ವಾದದಿಂದ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿಯ ಹರಡಲಿ ಎಂದು ನಾನು ಹಾರೈಸುತ್ತೇನೆ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.  

ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ‘ಗಣೇಶ ಚತುರ್ಥಿಯ ಹಬ್ಬದ ಶುಭಾಶಯಗಳು. ಗಣೇಶ ದೇವರ ಆಶೀರ್ವಾದ ಸದಾ ನಮ್ಮ ಮೇಲಿರಲಿ’ ಎಂದು ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಟ್ವೀಟ್ ಮಾಡಿ ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ. ‘ಸಮಸ್ತ ನಾಡಿನ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು. ಗಣಪತಿ ಬಪ್ಪ ಮೋರ್ಯ!’ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Supreme Court Verdict: ಬೆಂಗಳೂರಿನ ಈದ್ಗಾ ಮೈದಾನದಲ್ಲಿ ನಡೆಯಲ್ಲ ಗಣೇಶೋತ್ಸವ, ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಬ್ರೇಕ್

‘ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿ ಹಬ್ಬದ ಶುಭಾಶಯಗಳು. ವಿಘ್ನ ನಿವಾರಕ ಎಲ್ಲರ ಇಷ್ಟಾರ್ಥಗಳನ್ನು ಈಡೇರಿಸಿ, ನಾಡಿನಲ್ಲಿ ಜನತೆ ಸುಖ, ಶಾಂತಿ, ಸಮೃದ್ಧಿಯಿಂದ ನೆಲೆಸಲು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

‘ನಾಡಿನ ಸಮಸ್ತ ಜನತೆಗೆ ವಿನಾಯಕ ಚತುರ್ಥಿ ಹಬ್ಬದ ಭಕ್ತಿಪೂರ್ವಕ ಶುಭಾಶಯಗಳು. ವಿನಾಯಕ ಸ್ವಾಮಿಯ ಕೃಪೆ ನಾಡಿನ ಮೇಲೆ ನಿರಂತರವಾಗಿರಲಿ, ಎಲ್ಲ ವಿಘ್ನಗಳನ್ನು ಕಳೆದು ಎಲ್ಲರಿಗೂ ಸುಖ, ಸಂತೋಷ, ಆರೋಗ್ಯ, ಸಮೃದ್ಧಿಗಳನ್ನು ಕೊಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಶುಭ ಹಾರೈಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ‘ಸಂಕಷ್ಟಹರ ಗಣೇಶನು ಬದುಕಲ್ಲಿ ಎದುರಾಗುವ ಸಕಲ ವಿಘ್ನಗಳನ್ನು ಎದುರಿಸುವ ಆತ್ಮಬಲವನ್ನು ನಾಡಿನ ಜನರಲ್ಲಿ ತುಂಬಲಿ. ಕೊರೊನಾ, ಪ್ರವಾಹ, ವೈಷಮ್ಯಗಳ ಕಾರ್ಮೋಡ ಸರಿದು ಸುಖ-ಶಾಂತಿ, ಸೌಹಾರ್ದತೆ, ನೆಮ್ಮದಿಯ ಬೆಳಕು ಎಲ್ಲೆಡೆ ಹರಿಯಲಿ. ಪ್ರೀತಿಯ ನಾಡಬಂಧುಗಳಿಗೆ ಗಣೇಶ ಚತುರ್ಥಿಯ ಶುಭಾಶಯಗಳು’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಸಿಂಹಾಸನಾರೂಢ ಗಣಪತಿ ಪ್ರತಿಷ್ಠಾಪನೆ: ‘ಸುಪ್ರೀಂ’ ಮೆಟ್ಟಿಲೇರಿದ ಮುಸ್ಲಿಂ ಬೋರ್ಡ್

‘ಶ್ರೀ ಗಣೇಶ ಚತುರ್ಥಿ ಹಬ್ಬದ ಈ ಪಾವನ ದಿನದಂದು ಬಿಡದಿಯ ಕೇತಿಗಾನಹಳ್ಳಿಯ ನನ್ನ ತೋಟದಲ್ಲಿ ಶ್ರೀ ವಿನಾಯಕನ ಪೂಜೆ ನೆರೆವೇರಿಸಿದೆ. ಆ ಮಹಾಮಹಿಮನಾದ ಶ್ರೀ ವಿಘ್ನನಿವಾರಕನು ಪ್ರತಿಯೊಬ್ಬರಿಗೂ ಒಳಿತನ್ನೇ ಮಾಡಲಿ, ತನ್ನ ಅನುಗ್ರಹ-ಕರುಣೆಯನ್ನು ಬೀರಲಿ ಎಂದು ಬೇಡಿಕೊಂಡೆ’ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News