ಕರ್ನಾಟಕದ ಅಭಿವೃದ್ಧಿಗೆ ಅಂಬರೀಶ್ ದನಿಯಾಗಿದ್ದರು: ಪ್ರಧಾನಿ ಮೋದಿ

ನಟ, ಮಾಜಿ ಸಚಿವ ಅಂಬರೀಶ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. 

Updated: Nov 25, 2018 , 09:54 AM IST
ಕರ್ನಾಟಕದ ಅಭಿವೃದ್ಧಿಗೆ ಅಂಬರೀಶ್ ದನಿಯಾಗಿದ್ದರು: ಪ್ರಧಾನಿ ಮೋದಿ

ನವದೆಹಲಿ: ನಟ, ಮಾಜಿ ಸಚಿವ ಅಂಬರೀಶ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಒಬ್ಬ ನಟನಾಗಿ, ರಾಜಕಾರಣಿಯಾಗಿ ಅಂಬರೀಶ್ ಅವರ ಸಾಧನೆ ಎಂದಿಗೂ ಅಮರ. ಕರ್ನಾಟಕದ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಅಂಬರೀಶ್ ದನಿಯಾಗಿದ್ದರು. ಅವರ ನಿಧನದಿಂದ ಅಪಾರ ನಷ್ಟವಾಗಿದೆ. ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ. 

ತೀವ್ರ ಎದೆನೋವು ಹಾಗು ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶನಿವಾರ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಅಂಬರೀಶ್(66) ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 11 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಇವರ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಸಮಾಧಿ ಪಕ್ಕದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಸೋಮವಾರ ನಡೆಯಲಿದೆ.