ನವದೆಹಲಿ: ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ, ಪ್ರಧಾನಿ ನರೇಂದ್ರ ಮೋದಿ ಮುಂಬರುವ ಭಾನುವಾರ (ಮಾರ್ಚ್ 8) ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಡಿಲಿಟ್ ಮಾಡುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಈ ಕ್ರಮದ ಬಗ್ಗೆ ಎಲ್ಲವನ್ನೂ ಪೋಸ್ಟ್ ಮಾಡುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.



COMMERCIAL BREAK
SCROLL TO CONTINUE READING

'ಈ ಭಾನುವಾರ, ಫೇಸ್ಬುಕ್, ಟ್ವಿಟರ್, ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ನಲ್ಲಿ ನನ್ನ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಕೈಬಿಡುವ ಬಗ್ಗೆ ಯೋಚಿಸುತ್ತಿದ್ದೇನೆ. " ಎಂದು ಪಿಎಂ ಮೋದಿ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಹೆಚ್ಚು ಅನುಸರಿಸುವ ವ್ಯಕ್ತಿಗಳಲ್ಲಿ ಒಬ್ಬರು ಮತ್ತು ಅವರು ಪ್ರಪಂಚದಾದ್ಯಂತದ ಶತಕೋಟಿ ಜನರೊಂದಿಗೆ ಸಂಪರ್ಕದಲ್ಲಿರಲು ಅವರು ಸಾಮಾಜಿಕ ಮಾಧ್ಯಮವನ್ನು ಬಳಸುತ್ತಾರೆ.


ವಿಶೇಷವೆಂದರೆ, ಪ್ರಧಾನಿ ಮೋದಿ ಅವರು ಪ್ರಸ್ತುತ ಟ್ವಿಟರ್‌ನಲ್ಲಿ 53.3 ಮಿಲಿಯನ್ ಮತ್ತು ಫೇಸ್‌ಬುಕ್‌ನಲ್ಲಿ 44,722,143 ಅನುಯಾಯಿಗಳನ್ನು ಹೊಂದಿದ್ದಾರೆ. ಇನ್ಸ್ಟಾಗ್ರಾಮ್ ಮತ್ತು ಯುಟ್ಯೂಬ್ ನಲ್ಲಿ  ಕ್ರಮವಾಗಿ 35.2 ಮಿಲಿಯನ್ ಮತ್ತು 4.5 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾರೆ.