ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮನದ ಮಾತುಗಳನ್ನು 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಹಂಚಿಕೊಳ್ಳಲಿದ್ದಾರೆ. ಇದು 'ಮನ್ ಕಿ ಬಾತ್' ಕಾರ್ಯಕ್ರಮದ 42ನೇ ಸಂಚಿಕೆಯಾಗಿದ್ದು, ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನದಲ್ಲಿ ಇಂದು(ಮಾ.25) ಬೆಳಿಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ. ಈ ಕಾರ್ಯಕ್ರಮ ಪ್ರಧಾನಿ ನರೇಂದ್ರ ಮೋದಿ ಮೊಬೈಲ್ ಅಪ್ಲಿಕೇಶನ್ನಲ್ಲಿ ಕೂಡ ಪ್ರಸಾರವಾಗಲಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ. 



COMMERCIAL BREAK
SCROLL TO CONTINUE READING

ಮೊದಲಿಗೆ ಹಿಂದಿ ಭಾಷೆಯಲ್ಲಿ ಪ್ರಸಾರವಾದ ನಂತರ ಪ್ರಾದೇಶಿಕ ಭಾಷೆಗಳಲ್ಲಿ ಆಕಾಶವಾಣಿ ಈ ಕಾರ್ಯಕ್ರಮ ಪ್ರಸಾರ ಮಾಡಲಿದೆ. ಪ್ರಧಾನ ಮಂತ್ರಿ ಕಚೇರಿಯ ಯೂಟ್ಯೂಬ್ ಚಾನೆಲ್ಗಳಲ್ಲಿ, ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮತ್ತು ಡಿಡಿ ನ್ಯೂಸ್ ವಾಹಿನಿಯಲ್ಲಿಯೂ ಸಹ ರೇಡಿಯೋ ಭಾಷಣವನ್ನು ಪ್ರಸಾರ ಮಾಡಲಾಗುವುದು.


ಫೆಬ್ರವರಿ 25ರಂದು ಪ್ರಸಾರವಾದ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಕ್ಕೆ ಭಾರತದ ಕೊಡುಗೆಯ ಬಗ್ಗೆ ತಿಳಿಸಿದ್ದರು. ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನದ ಹಿನ್ನೆಲೆಯಲ್ಲಿ ಭಾಷಣ ಮಾಡಿದ್ದ ನರೇಂದ್ರ ಮೋದಿ, ವಿಜ್ಞಾನ ಮತ್ತು ತಂತ್ರಜ್ಞಾನವು ಪಕ್ಷಾತೀತವಾಗಿದೆ ಎಂದು ಪ್ರಧಾನಿ ಹೇಳಿದ್ದರು. 


'ಮನ್ ಕಿ ಬಾತ್' ಕಾರ್ಯಕ್ರಮದ 40ನೇ ಆವೃತ್ತಿಯಲ್ಲಿ ಪ್ರಧಾನ ಮಂತ್ರಿ ಮೋದಿ "ಮಹಿಳಾ ಶಕ್ತಿಯು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದು, ಮೈಲಿಗಲ್ಲುಗಳನ್ನು ಸ್ಥಾಪಿಸುತ್ತದೆ. ಹಾಗಾಗಿ ನಾರಿ ಶಕ್ತಿಗೆ ಯಾವುದೇ ಮಿತಿಗಳಿಲ್ಲ ಎಂದು ಹೇಳಿದ್ದರು.