ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶೇ 72 ರಷ್ಟು ಅನುಮೋದನೆಯೊಂದಿಗೆ ವಿಶ್ವ ನಾಯಕರಲ್ಲಿ ಜಾಗತಿಕ ರೇಟಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ಅಮೇರಿಕನ್ ಸಂಶೋಧನಾ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ಬಿಡುಗಡೆ ಮಾಡಿದ ಪಟ್ಟಿಯ ಪ್ರಕಾರ, ಪಿಎಂ ಮೋದಿ ಅವರು ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ (Global Leader Approval List) ಪಟ್ಟಿಯಲ್ಲಿ ಯುಎಸ್ ಅಧ್ಯಕ್ಷ ಜೋ ಬೈಡನ್ ಮತ್ತು ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ (Boris Johnson) ಅವರಂತಹ ವಿಶ್ವ ನಾಯಕರನ್ನು ಹಿಂದಿಕ್ಕಿ ಅತ್ಯಧಿಕ ರೇಟಿಂಗ್ ಗಳಿಸಿದ್ದಾರೆ.
ಇದನ್ನೂ ಓದಿ: 07-02-2022 Today Gold Price: ಇಂದಿನ ಚಿನ್ನ-ಬೆಳ್ಳಿ ದರ ಹೀಗಿದೆ
13 ವಿಶ್ವ ನಾಯಕರ ಪಟ್ಟಿಯಲ್ಲಿ, US ಅಧ್ಯಕ್ಷ ಜೋ ಬೈಡನ್ (Joe Biden) ಶೇಕಡಾ 41 ರಷ್ಟು ರೇಟಿಂಗ್‌ನೊಂದಿಗೆ ಆರನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಅವರು 41 ಪ್ರತಿಶತದೊಂದಿಗೆ ಎಂಟನೇ ಸ್ಥಾನದಲ್ಲಿದ್ದಾರೆ, ಕೆನಡಾದ ಅಧ್ಯಕ್ಷ ಜಸ್ಟಿನ್ ಟ್ರುಡೊ ನಂತರದ ಸ್ಥಾನದಲ್ಲಿದ್ದಾರೆ.
ಗ್ಲೋಬಲ್ ಲೀಡರ್ (Global Leader) ಅಪ್ರೂವಲ್ ರೇಟಿಂಗ್ ಪಟ್ಟಿಯ ಪ್ರಕಾರ, ಪಿಎಂ ನರೇಂದ್ರ ಮೋದಿ 13 ವಿಶ್ವ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಮತ್ತು ಮೆಕ್ಸಿಕೊ ಅಧ್ಯಕ್ಷ ಒಬ್ರಡಾರ್ 64 ಪ್ರತಿಶತ, ಇಟಲಿ ಪಿಎಂ ಮಾರಿಯೋ ಡ್ರಾಘಿ ಶೇಕಡಾ 57, ಫ್ಯೂಮಿಯೊ ಕಿಶಿಡಾ ಶೇಕಡಾ 47 ರೇಟಿಂಗ್ ಪಡೆದಿದ್ದಾರೆ.
Global Leader Approval: Among All Adults https://t.co/wRhUGstJrS
Modi: 72%
López Obrador: 64%
Draghi: 57%
Kishida: 47%
Scholz: 42%
Biden: 41%
Moon: 41%
Morrison: 41%
Trudeau: 41%
Sánchez: 37%
Bolsonaro: 36%
Macron: 35%
Johnson: 30%*Updated 02/03/22 pic.twitter.com/h51SXXBAFj
— Morning Consult (@MorningConsult) February 6, 2022
ಯುಎಸ್ ಅಧ್ಯಕ್ಷ ಜೋ ಬೈಡನ್, ದಕ್ಷಿಣ ಕೊರಿಯಾದ ಅಧ್ಯಕ್ಷ ಮೂನ್ ಜೇ-ಇನ್, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಎಲ್ಲರೂ 41 ಪ್ರತಿಶತ ರೇಟಿಂಗ್ ಗಳಿಸಿದ್ದಾರೆ.
ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಶೇ 37, ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಶೇ 35, ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಪಟ್ಟಿಯಲ್ಲಿ ಅತ್ಯಂತ ಕಡಿಮೆ ಅಂಕ ಗಳಿಸಿದ್ದಾರೆ..
ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಪ್ರಸ್ತುತ ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಫ್ರಾನ್ಸ್, ಜರ್ಮನಿ, ಭಾರತ, ಇಟಲಿ, ಜಪಾನ್, ಮೆಕ್ಸಿಕೋ, ದಕ್ಷಿಣ ಕೊರಿಯಾ, ಸ್ಪೇನ್, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ರೇಟಿಂಗ್‌ಗಳನ್ನು ಟ್ರ್ಯಾಕ್ ಮಾಡುತ್ತಿದೆ. ಎಲ್ಲಾ 13 ದೇಶಗಳಿಗೆ ಇತ್ತೀಚಿನ ಡೇಟಾದೊಂದಿಗೆ, ಜಗತ್ತಿನಾದ್ಯಂತ ಬದಲಾಗುತ್ತಿರುವ ರಾಜಕೀಯ ಡೈನಾಮಿಕ್ಸ್‌ಗೆ ನೈಜ-ಸಮಯದ ಒಳನೋಟವನ್ನು ನೀಡುತ್ತದೆ.
ಇದನ್ನೂ ಓದಿ: 'Work From Home'ಗೆ ಸಂಬಂಧಿಸಿದಂತೆ ಹೊಸ ಸೂಚನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ
ಗಮನಾರ್ಹವಾಗಿ, ಸತತ ಮೂರನೇ ವರ್ಷ ಪಿಎಂ ನರೇಂದ್ರ ಮೋದಿ (Modi) ಅವರು ವಿಶ್ವದ ಇತರ ಎಲ್ಲ ನಾಯಕರಿಗಿಂತ ಹೆಚ್ಚಿನ ರೇಟಿಂಗ್ ಗಳಿಸುವ ಮೂಲಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.