ನವದೆಹಲಿ: ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲೇ ತುರ್ತು ಪರಿಸ್ಥಿತಿಯನ್ನು ಒಂದು ಕರಾಳ ಅಧ್ಯಾಯವೆಂದು ನೆನಪಿಸಿಕೊಳ್ಳಲಾಗುತ್ತದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅಧಿಕಾರದಲ್ಲಿದ್ದಾಗ ಅಂದರೆ 1975 ಜೂ.25ರಂದು ತುರ್ತು ಪರಿಸ್ಥಿತಿ ಘೋಷಣೆಯಾಗಿತ್ತು. 21 ತಿಂಗಳ ನಂತರ, 1977 ಮಾ.21ರಂದು ತುರ್ತು ಪರಿಸ್ಥಿತಿಯನ್ನು ಹಿಂತೆಗೆದುಕೊಳ್ಳಲಾಯಿತು.


COMMERCIAL BREAK
SCROLL TO CONTINUE READING

ದೇಶದ ಪ್ರಜಾಪ್ರಭುತ್ವದಲ್ಲಿ ತುರ್ತು ಪರಿಸ್ಥಿತಿ ಘೋಷಣೆಗೊಂಡು ಇಂದಿಗೆ 44 ವರ್ಷ. 44 ವರ್ಷಗಳ ಹಿಂದೆ ಘೋಷಿಸಲಾಗಿದ್ದ ತುರ್ತು ಪರಿಸ್ಥಿತಿಯನ್ನು ನೆನೆದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಬಿಜೆಪಿ ನಾಯಕರು ಟ್ವೀಟ್ ಮಾಡಿದ್ದಾರೆ.


ವಿಡಿಯೋ ತುಣುಕನ್ನು ಶೇರ್ ಮಾಡಿ ತುರ್ತು ಪರಿಸ್ಥಿತಿ ನೆನೆದ ಪ್ರಧಾನಿ ಮೋದಿ:
ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ತುಣುಕನ್ನು ಹಾಕಿ ತುರ್ತು ಪರಿಸ್ಥಿತಿಯನ್ನು ನೆನಪಿಸಿಕೊಂಡಿದ್ದಾರೆ. ಪ್ರಧಾನಮಂತ್ರಿ ಟ್ವಿಟರ್‌ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಸಂಸತ್ತಿನ ಭಾಷಣದ ತುಣುಕನ್ನು ಸಹ ತೋರಿಸಲಾಗಿದೆ. 



ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. 1975 ರಲ್ಲಿ ರಾಜಕೀಯ ಹಿತಾಸಕ್ತಿಗಾಗಿ ದೇಶದ ಪ್ರಜಾಪ್ರಭುತ್ವವನ್ನು ಕೊಲ್ಲಲಾಯಿತು. ಅವರ ಮೂಲ ಹಕ್ಕುಗಳನ್ನು ದೇಶವಾಸಿಗಳಿಂದ ಕಸಿದುಕೊಳ್ಳಲಾಯಿತು. ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸಲು ಲಕ್ಷಾಂತರ ರಾಷ್ಟ್ರೀಯವಾದಿಗಳು ಅನೇಕ ಚಿತ್ರಹಿಂಸೆಗಳನ್ನು ಎದುರಿಸಿದ್ದಾರೆ. ಆ ಎಲ್ಲಾ ಹೋರಾಟಗಾರರಿಗೆ ನಾನು ನಮಸ್ಕರಿಸುತ್ತೇನೆ ಎಂದು ಬರೆದಿದ್ದಾರೆ.