Easter 2023: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಈಸ್ಟರ್ ಸಂದರ್ಭದಲ್ಲಿ ದೆಹಲಿಯ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್ ಕ್ಯಾಥೋಲಿಕ್ ಚರ್ಚ್‌ಗೆ ಭೇಟಿನೀಡಿದ್ದಾರೆ. ಚರ್ಚ್‌ನಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ ಕೋರಲಾಗಿದೆ. ಚರ್ಚಿನ ಧರ್ಮಗುರುಗಳು ಶಾಲ್ ಹೊದಿಸಿ ಗೌರವಿಸಿದ್ದಾರೆ. ಈ ಅವಧಿಯಲ್ಲಿ ಪ್ರಧಾನಿ ಕೂಡ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಇಂದು ಈಸ್ಟರ್ ಹಬ್ಬದ ವಿಶೇಷ ಸಂದರ್ಭದಲ್ಲಿ ದೆಹಲಿಯ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್‌ಗೆ ಭೇಟಿ ನೀಡುವ ಅವಕಾಶ ಸಿಕ್ಕಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ನಾನು ಕ್ರಿಶ್ಚಿಯನ್ ಸಮುದಾಯದ ಆಧ್ಯಾತ್ಮಿಕ ನಾಯಕರನ್ನು ಸಹ ಭೇಟಿಯಾದೆ ಎಂದಿದ್ದಾರೆ.
Today, on the very special occasion of Easter, I had the opportunity to visit the Sacred Heart Cathedral in Delhi. I also met spiritual leaders from the Christian community.
Here are some glimpses. pic.twitter.com/7ig2Q4yHAT
— Narendra Modi (@narendramodi) April 9, 2023
ಇದನ್ನೂ ಓದಿ-Good News: ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.50ಕ್ಕೆ ಏರಿಕೆಯಾಗಲಿದೆ, ವೇತನದಲ್ಲಿ ಮತ್ತೆ ರೂ.9000 ಹೆಚ್ಚಳ!
ಪ್ರಧಾನಿ ಚರ್ಚ್‌ಗೆ ಭೇಟಿ ನೀಡುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ದೆಹಲಿಯ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್ ಕ್ಯಾಥೋಲಿಕ್ ಚರ್ಚ್‌ನ ಫಾದರ್ ಫ್ರಾನ್ಸಿಸ್ ಸ್ವಾಮಿನಾಥನ್, "ನಾವು ತುಂಬಾ ಉತ್ಸುಕರಾಗಿದ್ದೇವೆ, ಮೊದಲ ಬಾರಿಗೆ ಇಲ್ಲಿನ ಚರ್ಚ್‌ಗೆ ಪ್ರಧಾನಿ ಬರುತ್ತಿದ್ದಾರೆ" ಎಂದು ಹೇಳಿದ್ದಾರೆ. ನಾವು ಅವರಿಗಾಗಿ ಪ್ರಾರ್ಥಿಸುತ್ತೇವೆ... ಅವರ ಬರುವಿಕೆಯು ಅವರು ಎಲ್ಲಾ ಧರ್ಮಗಳನ್ನು ಸಬ್ಕಾ ಸಾಥ್, ಸಬ್ಕಾ ವಿಕಾಸ್‌ನಲ್ಲಿ ಒಟ್ಟಿಗೆ ತೆಗೆದುಕೊಳ್ಳುತ್ತಾರೆ ಎಂಬ ದೊಡ್ಡ ಸಂದೇಶವನ್ನು ನೀಡುತ್ತದೆ ಎಂದಿದ್ದಾರೆ.
ಇದನ್ನೂ ಓದಿ-Post Office Scheme: ನಿತ್ಯ ಕೇವಲ 6 ರೂ. ಠೇವಣಿ ಇರಿಸಿ, ನಿಮ್ಮ ಮಗುವಿನ ಭವಿಷ್ಯಕ್ಕಾಗಿ ಲಕ್ಷಾಂತರ ಉಳಿತಾಯ ಮಾಡಿ!
ಇದಕ್ಕೂ ಮುನ್ನ ಟ್ವೀಟ್ ಮಾಡುವ ಮೂಲಕ ಈಸ್ಟರ್ ಶುಭಾಶಯ ಕೋರಿದ ಪ್ರಧಾನಿ ಮೋದಿ, ಈ ವಿಶೇಷ ಸಂದರ್ಭ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಮನೋಭಾವವನ್ನು ಆಳವಾಗಿಸಬೇಕು ಎಂದು ಬರೆದಿದ್ದಾರೆ. ಈ ಹಬ್ಬವು ಸಮಾಜಕ್ಕೆ ಸೇವೆ ಸಲ್ಲಿಸಲು ಜನರನ್ನು ಪ್ರೇರೇಪಿಸಲಿ ಮತ್ತು ಹಿಂದುಳಿದವರನ್ನು ಸಬಲೀಕರಣಗೊಳಿಸಲು ಸಹಾಯ ಮಾಡಲಿ. ಈ ದಿನ ನಾವು ಲಾರ್ಡ್ ಜೀಸಸ್ ಕ್ರೈಸ್ಟ್ ಅವರ ಪವಿತ್ರ ಆಲೋಚನೆಗಳನ್ನು ನೆನಪಿಸಿಕೊಳ್ಳುತ್ತೇವೆ ಎಂದಿದ್ದಾರೆ
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.