ನೂತನ ಶಿಕ್ಷಣ ನೀತಿ ಬಗ್ಗೆ ಇಂದು ಪ್ರಧಾನಿ ಮೋದಿ ಭಾಷಣ
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಸಮಾವೇಶವನ್ನು ಉದ್ಘಾಟಿಸಿ ಭಾಷಣ ಮಾಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ತಿಳಿಸಿದ್ದಾರೆ.
ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಇವತ್ತು ಸಮಾವೇಶ ನಡೆಯಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendar Modi) ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಸಮಾವೇಶವನ್ನು ಉದ್ಘಾಟಿಸಿ ಭಾಷಣ ಮಾಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ತಿಳಿಸಿದ್ದಾರೆ.
New Education Policy) ಯಾವ ರೀತಿಯಲ್ಲಿ ಉನ್ನತ ಶಿಕ್ಷಣ ಕ್ಷೇತ್ರವನ್ನು ಸುಧಾರಣೆ ಮಾಡಲೊರಟಿದೆ ಎಂಬುದನ್ನು ತಿಳಿಸಲು ಸಮಾವೇಶ ನಡೆಸಲಾಗುತ್ತಿದೆ. ನೂತನ ಶಿಕ್ಷಣ ನೀತಿಯ ಪ್ರಯೋಜನಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡದ್ದಾರೆ. ಹೊಸದಾಗಿ ಪರಿಚಯಿಸುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿಯ ಸಮಗ್ರ ಚಿತ್ರಣವನ್ನು ತಿಳಿಸಲಿದ್ದಾರೆ ಎನ್ನಲಾಗುತ್ತಿದೆ.
ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಸಮಾವೇಶವನ್ನು ಆಯೋಜಿಸುತ್ತಿದೆ. ಸಮಗ್ರ ಹಾಗೂ ಭವಿಷ್ಯದ ಶಿಕ್ಷಣ ಬಗ್ಗೆ ಸಮಾವೇಶದಲ್ಲಿ ಚರ್ಚೆಯಾಗಲಿದೆ. ಜೊತೆಗೆ ಗುಣಮಟ್ಟದ ಸಂಶೋಧನೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನವನ್ನು ಅಳವಡಿಕೆ ಮಾಡಿಕೊಳ್ಳುವ ಬಗ್ಗೆಯೂ ಚರ್ಚೆಗಳು ನಡೆಯಲಿವೆ.
ತ್ರಿಭಾಷಾ ಸೂತ್ರ, ಮಕ್ಕಳ ಶೈಕ್ಷಣಿಕ ಭಾರವನ್ನು ಕಡಿಮೆಗೊಳಿಸುವ, ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆಯ ವ್ಯಾಪ್ತಿಯನ್ನು ದೊಡ್ಡದು ಮಾಡುವ, ಪಠ್ಯಕ್ರಮಗಳನ್ನು ಬದಲಾಯಿಸುವ ಅಂಶಗಳನ್ನು ಒಳಗೊಂಡ ನೂತನ ಶಿಕ್ಷಣ ನೀತಿಯನ್ನು ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ತ್ರಿಭಾಷಾ ಸೂತ್ರಕ್ಕೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿದೆ.