PM Modi Mother Health : ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಚಿಕಿತ್ಸೆಗಾಗಿ ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.


COMMERCIAL BREAK
SCROLL TO CONTINUE READING

ಈ ಹಿಂದೆ ಗುಜರಾತ್ ವಿಧಾನಸಭೆ ಚುನಾವಣೆ ವೇಳೆ ಪ್ರಧಾನಿ ಮೋದಿ ತಮ್ಮ ತಾಯಿಯನ್ನು ಗಾಂಧಿನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು. ಆ ವೇಳೆ ಮೋದಿ ಅವರು ತಮ್ಮ ತಾಯಿಯ ಪಕ್ಕದಲ್ಲಿ ಕುಳಿತು ಕೆಲಕಾಲ ಮಾತನಾಡಿದರು. ಬಳಿಕ ಮೋದಿ ತಾಯಿಯ ಪಾದ ಮುಟ್ಟಿ ಆಶೀರ್ವಾದ ಪಡೆದಿದ್ದರು. ಇದೀಗ ಹೀರಾಬೆನ್‌ ಅವರ ಆರೋಗ್ಯದಲ್ಲಿ ಏರುಪಾರದ ಹಿನ್ನಲೆ ಮೆಹ್ತಾ ಆಸ್ಪತ್ರಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ: WATCH : ಹೆತ್ತವ್ವನ ಕೊನೆಯಾಸೆ ಈಡೇರಿಸಲು ICUನಲ್ಲಿ ಮದುವೆಯಾದ ಮಗಳು, ಕಣ್ಣೀರು ತರಿಸುತ್ತೆ ವಿಡಿಯೋ


ಜೂನ್ 18 ರಂದು, ಹೀರಾಬೆನ್ ಮೋದಿ 100 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅಲ್ಲದೆ, ನಿನ್ನೆ ಮೈಸೂರು ಬಳಿ ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಮತ್ತು ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಘಟನೆಯಲ್ಲಿ ಪ್ರಹ್ಲಾದ್‌ ಅವರು ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಜೆಎಸ್‌ಎಸ್ ಆಸ್ಪತ್ರೆಗೆ ದಾಖಲಾಗಿದ್ದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.