Vaccine Certificate: ಕರೋನಾ ಲಸಿಕೆ ಪ್ರಮಾಣಪತ್ರದಲ್ಲಿ ಕಾಣಿಸುವುದಿಲ್ಲ ಪ್ರಧಾನಿ ಮೋದಿಯವರ ಚಿತ್ರ, ಕಾರಣ!
Vaccine Certificate: ಮೂಲಗಳ ಪ್ರಕಾರ, ಲಸಿಕೆ ಪ್ರಮಾಣಪತ್ರದಿಂದ ಮೋದಿ ಅವರ ಚಿತ್ರವನ್ನು ತೆಗೆದುಹಾಕಲು ಕೇಂದ್ರ ಆರೋಗ್ಯ ಸಚಿವಾಲಯವು ಕೋವಿನ್ ಪ್ಲಾಟ್‌ಫಾರ್ಮ್‌ನಲ್ಲಿ ಅಗತ್ಯ ಫಿಲ್ಟರ್‌ಗಳನ್ನು ಹಾಕುತ್ತದೆ.
Vaccine Certificate: 5 ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಇದರೊಂದಿಗೆ ಈ ರಾಜ್ಯಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಇಂತಹ ಪರಿಸ್ಥಿತಿಯಲ್ಲಿ, ಈಗ ಈ 5 ರಾಜ್ಯಗಳಲ್ಲಿ ಆರೋಗ್ಯ ಸಚಿವಾಲಯವು ನೀಡಲಿರುವ ಕೋವಿಡ್ ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಚಿತ್ರವನ್ನು ತೆಗೆದುಹಾಕಲಾಗುತ್ತದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ .
ಆರೋಗ್ಯ ಸಚಿವಾಲಯವು ಫಿಲ್ಟರ್‌ಗಳನ್ನು ಸ್ಥಾಪಿಸುತ್ತದೆ
ಮೂಲಗಳ ಪ್ರಕಾರ, ಲಸಿಕೆ ಪ್ರಮಾಣಪತ್ರದಿಂದ (Covid Vaccination Certificate) ಪ್ರಧಾನಿ ಮೋದಿ ಅವರ ಚಿತ್ರವನ್ನು ತೆಗೆದುಹಾಕಲು ಕೇಂದ್ರ ಆರೋಗ್ಯ ಸಚಿವಾಲಯವು ಕೋವಿನ್ ಪ್ಲಾಟ್‌ಫಾರ್ಮ್‌ನಲ್ಲಿ ಅಗತ್ಯ ಫಿಲ್ಟರ್‌ಗಳನ್ನು ಹಾಕುತ್ತದೆ. ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾ ವಿಧಾನಸಭಾ ಚುನಾವಣೆಗಳು (Assembly Elections) ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ಏಳು ಹಂತಗಳಲ್ಲಿ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ಚುನಾವಣಾ ವೇಳಾಪಟ್ಟಿ ಪ್ರಕಟವಾಗುವುದರೊಂದಿಗೆ ಸರಕಾರ, ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳಿಗೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.
ಇದನ್ನೂ ಓದಿ- Omicron: ಎರಡನೇ ಡೋಸ್ ಪಡೆದ ಎಷ್ಟು ತಿಂಗಳ ನಂತರ ಬೂಸ್ಟರ್ ಡೋಸ್ ತೆಗೆದುಕೊಳ್ಳಬೇಕು?
ಪ್ರಮಾಣಪತ್ರದಿಂದ ಪ್ರಧಾನಿ ಮೋದಿ ಅವರ ಚಿತ್ರವನ್ನು ತೆಗೆದುಹಾಕಲಾಗುತ್ತದೆ:
“ಮಾದರಿ ನೀತಿ ಸಂಹಿತೆ ಜಾರಿಯಿಂದಾಗಿ, ಈ 5 ರಾಜ್ಯಗಳ ಚುನಾವಣೆ ಮುಗಿಯುವವರೆಗೆ ಕೋವಿಡ್ -19 ಲಸಿಕೆ ಪ್ರಮಾಣಪತ್ರಗಳಿಂದ (Covid Vaccination Certificate) ಪ್ರಧಾನಿಯವರ ಚಿತ್ರವನ್ನು ತೆಗೆದುಹಾಕಲು ಆರೋಗ್ಯ ಸಚಿವಾಲಯವು ಕೋವಿನ್ ವೇದಿಕೆಯಲ್ಲಿ ಅಗತ್ಯ ಫಿಲ್ಟರ್‌ಗಳನ್ನು ಸ್ಥಾಪಿಸುತ್ತದೆ" ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಇದನ್ನೂ ಓದಿ- Booster Dose Guideline: ಇಂದಿನಿಂದ ಇಡೀ ದೇಶದಲ್ಲಿ ಬೂಸ್ಟರ್ ಡೋಸ್ ಲಸಿಕೆ ಲಭ್ಯ, ಈ ಪ್ರಮುಖ ನಿಯಮಗಳನ್ನು ತಿಳಿಯಿರಿ
ಈ ಹಿಂದೆಯೂ ಕೋವಿಡ್ -19 ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ಮೋದಿಯವರ ಫೋಟೋ ತೆಗೆಯಲಾಗಿತ್ತು:
ಮಾರ್ಚ್ 2021 ರಲ್ಲಿ, ಕೆಲವು ರಾಜಕೀಯ ಪಕ್ಷಗಳ ದೂರುಗಳ ನಂತರ ಚುನಾವಣಾ ಆಯೋಗದ ಸಲಹೆಯ ಮೇರೆಗೆ ಆರೋಗ್ಯ ಸಚಿವಾಲಯವು ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ಚುನಾವಣೆಗಳ ಸಮಯದಲ್ಲಿ ಇದೇ ರೀತಿಯ ಕ್ರಮಗಳನ್ನು ತೆಗೆದುಕೊಂಡಿತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.