ನವದೆಹಲಿ: ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕಿದ ನಂತರ, ಪ್ರಧಾನಿ ನರೇಂದ್ರ ಮೋದಿ ಸರ್ಕಾರ 'ಅಖಂಡ ಕಾಶ್ಮೀರ'ಕ್ಕಾಗಿ ಯೋಜನೆಯನ್ನು ಸಿದ್ಧಪಡಿಸಿದೆ. ಇದರಲ್ಲಿ, ಜಮ್ಮು-ಕಾಶ್ಮೀರವನ್ನು ಅಭಿವೃದ್ಧಿಪಡಿಸಲು ಮತ್ತು ಕಣಿವೆ ರಾಜ್ಯದಲ್ಲಿ ಯುವಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗವನ್ನು ಒದಗಿಸಲು, ಉತ್ತಮ ಶಿಕ್ಷಣವನ್ನು ಒದಗಿಸಲು ಮಾರ್ಗಸೂಚಿಯನ್ನು ರೂಪಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸುಮಾರು 50 ಸಾವಿರ ಹೊಸ ಸರ್ಕಾರಿ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದು ರಾಜ್ಯಪಾಲ ಸತ್ಪಾಲ್ ಮಲಿಕ್ ಸ್ಪಷ್ಟಪಡಿಸಿದರು. ಅಲ್ಲದೆ 50 ಹೆಚ್ಚುವರಿ ಪದವಿ ಕಾಲೇಜುಗಳನ್ನು ತೆರೆಯಲಾಗುವುದು ಎಂದು ಅವರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

'ಅಖಂಡ ಕಾಶ್ಮೀರ'ಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಪ್ಲಾನ್:
1. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸುವುದು.


2. ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಲ್ಲಿ 50,000 ಸರ್ಕಾರಿ ಉದ್ಯೋಗಗಳ ಸೃಷ್ಟಿ.


3. ಜಮ್ಮು & ಕಾಶ್ಮೀರ, ಲಡಾಖ್ 6 ತಿಂಗಳಲ್ಲಿ ಅದ್ಭುತ ಬೆಳವಣಿಗೆಯನ್ನು ಕಾಣಲಿದೆ- ರಾಜ್ಯಪಾಲ ಮಲಿಕ್


4. 50 ಪದವಿ ಕಾಲೇಜುಗಳನ್ನು ತೆರೆಯಲಾಗುವುದು ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ ಕಾಲೇಜುಗಳನ್ನು ತೆರೆಯಲಾಗುವುದು.


5. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಪ್ರತಿ ಜಿಲ್ಲೆಯಲ್ಲೂ ಐಟಿಐ ರಚಿಸಲು ಯೋಜನೆ.


ಪ್ರಧಾನಿ ಮೋದಿ ಅವರ 'ಪ್ಲಾನ್ ಕಾಶ್ಮೀರ':
ಸಂಸದೀಯ ಕ್ಷೇತ್ರ ಅಥವಾ ಸಚಿವಾಲಯದ ಯಾರಾದರೂ ಜಮ್ಮು-ಕಾಶ್ಮೀರದ ನಿವಾಸಿಯಾಗಿರಬೇಕು ಎಂದು ಸಂಪುಟ ಸಭೆಯಲ್ಲಿ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ಅವರೊಂದಿಗೆ ಮಾತನಾಡಿ, ಜಮ್ಮು-ಕಾಶ್ಮೀರಡ ಅಭಿವೃದ್ಧಿಗೆ ಅಗತ್ಯವಾದ ಅಂಶಗಳ ಬಗ್ಗೆ ಸಮಾಲೋಚನೆ ನಡೆಸಿ, ಸಾಧಕ-ಭಾದಕಗಳ ಬಗ್ಗೆ ನಿರ್ಧರಿಸುವುದು ಪ್ರಧಾನಿ ಮೋದಿ ಅವರ 'ಪ್ಲಾನ್ ಕಾಶ್ಮೀರ'ದ ಒಂದು ಭಾಗವಾಗಿದೆ.