ಚೆನ್ನೈ: ಎಸ್ಆರ್ಎಂ ವಿಶ್ವವಿದ್ಯಾಲಯದ ಆವರಣದಲ್ಲಿರುವ ವಿದ್ಯಾರ್ಥಿನಿಯರ ಹಾಸ್ಟೆಲ್ ಲಿಫ್ಟ್ ನಲ್ಲಿ ವಿದ್ಯಾರ್ಥಿನಿಯೆದುರಿಗೇ ಹಸ್ತಮೈಥುನ ಮಾಡಿಕೊಂಡಿದ್ದ ಸ್ವಚ್ಛತಾ ಸಿಬ್ಬಂದಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.
ಚೆನ್ನೈನ ಹೊರವಲಯದಲ್ಲಿರುವ ವಿವಿ ಆವರಣದಲ್ಲಿರುವ ವಿದ್ಯಾರ್ಥಿನಿಯರ ಹಾಸ್ಟೆಲ್ ಲಿಫ್ಟ್ ನಲ್ಲಿ ಸ್ವಚ್ಛತಾ ಸಿಬ್ಬಂದಿಯೊಬ್ಬ ವಿದ್ಯಾರ್ಥಿನಿಯೆದುರಿಗೇ ಹಸ್ತಮೈಥುನ ಮಾಡಿಕೊಂಡು ಲೈಂಗಿಕ ಕಿರುಕುಳ ನೀಡಿದ ಘಟನೆ ಗುರುವಾರ ನಡೆದಿತ್ತು. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿಯರು ತೀವ್ರ ಪ್ರತಿಭಟನೆ ನಡೆಸಿದ್ದರು. ಆದರೆ, ವಿದ್ಯಾರ್ಥಿನಿಯು ತೊಟ್ಟಿದ್ದ ಕನಿಷ್ಠ ಉಡುಗೆಯೇ ಈ ಘಟನೆಗೆ ಕಾರಣವೆಂದು ಕಾಲೇಜು ಆಡಳಿತ ಹೇಳಿಕೆ ನೀಡಿತ್ತು.
ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿಯರು ವಿವಿ ಆಡಳಿತದ ವಿರುದ್ಧವೂ ತಮ್ಮ ಆಕ್ರೋಶ ತೋರ್ಪಡಿಸಿದ್ದರು. ಈ ಬೆನ್ನಲ್ಲೇ ಇಂದು ಪೊಲೀಸರು 28 ವರ್ಷದ ಆರೋಪಿಯನ್ನು ಬಂಧಿಸಿದ್ದಾರೆ.