ಪುಲ್ವಾಮ ದಾಳಿ: 7 ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

ಸಿಆರ್ಪಿಎಫ್ ಯೋಧರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಈ ದಾಳಿ ನಡೆಸಿದೆ ಎನ್ನಲಾಗಿದೆ

Last Updated : Feb 16, 2019, 10:22 AM IST
ಪುಲ್ವಾಮ ದಾಳಿ: 7 ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು title=

ಶ್ರೀನಗರ:  ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆತ್ಮಾಹುತಿ ದಾಳಿ ಪ್ರಕರಣದ ತನಿಖೆಯಾ ಹೊಣೆ ಹೊತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಜಮ್ಮ-ಕಾಶ್ಮೀರಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದು, ಈ ದಾಳಿಗೆ ಪರೋಕ್ಷವಾಗಿ ಸಹಕರಿಸಿರುವ ಶಂಕೆ ಮೇರೆಗೆ ಸೇಮ್ಬು ನವಾಬ್ ಮತ್ತು ಲರಾರು ಪ್ರದೇಶದಿಂದ 6 ಯುವಕರನ್ನು ಹಾಗೂ ರಾಮು ಗ್ರಾಮದಿಂದ ಓರ್ವ ಯುವಕನನ್ನು ಎನ್ಐಎ ಪೊಲೀಸರು ಬಂಧಿಸಿದ್ದಾರೆ. 

ಸಿಆರ್ಪಿಎಫ್ ಯೋಧರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಈ ದಾಳಿ ನಡೆಸಿದೆ ಎನ್ನಲಾಗಿದ್ದು, ಕಮ್ರಾನ್ ಎಂಬ ವ್ಯಕ್ತಿ ಇಡೀ ದಾಳಿಯ ಸಂಚು ರೂಪಿಸಿದ್ದ ಎನ್ನಲಾಗಿದೆ. ಈಗಾಗಲೇ ರಾಷ್ಟ್ರೀಯ ಭದ್ರತಾ ಪಡೆಯ ವಿಶೇಷ ತಂಡವೂ ಸಿಬ್ಬಂದಿ ಸಹ ಘಟನಾ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ಆರಂಭಿಸಿದೆ. 

ಮತ್ತೊಂದೆಡೆ, ಕೇಂದ್ರ ಗ್ರುಅ ಮಂತ್ರಿ ರಾಜನಾಥ್ ಸಿಂಗ್ ಜಮ್ಮು-ಕಾಶ್ಮೀರಕ್ಕೆ ಆಗಮಿಸಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಮುನ್ನೆಚ್ಚರಿಕಾ ಕ್ರಮವಾಗಿ ಜನಸಾಮಾನ್ಯರ ಸಂಚಾರವನ್ನು ಕೆಲ ಕಾಲದವರೆಗೆ ನಿರ್ಬಂಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗುರುವಾರ ಉಗ್ರ ಸಂಘಟನೆಯೊಂದು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 40 ಯೋಧರು ಮೃತಪಟ್ಟಿದ್ದಾರೆ. 

Trending News