ಜೈಪುರ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ತೆರಳಿದ್ದ ಪೊಲೀಸ್ ಕಾನ್ಸ್ಟೇಬಲ್ ಗೆ ದೊಣ್ಣೆಯಿಂದ ಥಳಿಸಿ ಹತ್ಯೆ ಮಾಡಿದ ಘಟನೆ ರಾಜಸ್ಥಾನದ ರಾಜ್ಸಾಮಂಡ್ ಜಿಲ್ಲೆಯ ಹಮೆಲಾ ಕಿ ಬೆರ್ ಗ್ರಾಮದಲ್ಲಿ ಶನಿವಾರ ನಡೆದಿದೆ.


COMMERCIAL BREAK
SCROLL TO CONTINUE READING

ಕುನ್ವಾರಿಯಾ ನಿವಾಸಿ ಹೆಡ್ ಕಾನ್ಸ್ಟೇಬಲ್ ಅಬ್ದುಲ್ ಗನಿ (48) ಅವರು ಆಸ್ತಿ ವಿವಾವದ ತನಿಖೆ ವೇಳೆ ವಿಚಾರಣೆ ನಡೆಸಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಕೂಡಲೇ ಗನಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭುವನ್ ಭೂಷನ್ ತಿಳಿಸಿದ್ದಾರೆ. 



ಈ ಘಟನೆಯಿಂದಾಗಿ ಪೊಲೀಸ್ ಇಲಾಖೆಗೆ ಆಘಾತವಾಗಿದ್ದು, ಆರೋಪಿಗಳನ್ನು ಪತ್ತೆ ಹಚ್ಚಲು ತನಿಖೆ ಆರಂಭಿಸಲಾಗಿದೆ ಎಂದು  ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.