Poonch Encounter: ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾಧಿಕಾರಿ ಸೇರಿದಂತೆ 4 ಸೈನಿಕರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್ಕೌಂಟರ್ ನಲ್ಲಿ ಒಬ್ಬ ಸೇನಾಧಿಕಾರಿ ಮತ್ತು ಇತರ ನಾಲ್ವರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Written by - Zee Kannada News Desk | Last Updated : Oct 11, 2021, 08:14 PM IST
Poonch Encounter: ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾಧಿಕಾರಿ ಸೇರಿದಂತೆ 4 ಸೈನಿಕರು ಹುತಾತ್ಮ title=
ಸಾಂದರ್ಭಿಕ ಚಿತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್ಕೌಂಟರ್ ನಲ್ಲಿ ಒಬ್ಬ ಸೇನಾಧಿಕಾರಿ ಮತ್ತು ಇತರ ನಾಲ್ವರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Firing In Srinagar: ಕಣಿವೆ ರಾಜ್ಯದಲ್ಲಿ ಮುಂದುವರೆದ ಉಗ್ರರ ಅಟ್ಟಹಾಸ, ಇಬ್ಬರು ಶಿಕ್ಷಕರ ಹತ್ಯೆ

ಮೂಲಗಳ ಪ್ರಕಾರ ಸುರಂಕೋಟೆ ಪ್ರದೇಶದಲ್ಲಿ ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು, ಕನಿಷ್ಠ ನಾಲ್ಕರಿಂದ ಐದು ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರು ಕೆಲವು ದಿನಗಳ ಹಿಂದೆ ದೇಶದ ಗಡಿಯೊಳಗೆ ನುಸುಳಿದ್ದರು.ದೆರಾಕಿ ಗಾಲಿ ಸಮೀಪದ ಹಳ್ಳಿಯಲ್ಲಿ ಮುಂಜಾನೆ ಅವರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿಯ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಅವರು ಹೇಳಿದರು.

ಇದನ್ನೂ ಓದಿ-R.1 variant of COVID-19: ಜಗತ್ತಿಗೆ ಭೀತಿ ಹುಟ್ಟಿಸಿದ ಹೊಸ ಕೊರೊನಾ ತಳಿ..!

ಅಡಗಿಕೊಂಡಿದ್ದ ಭಯೋತ್ಪಾದಕರು ಶೋಧನಾ ತಂಡಗಳ ಮೇಲೆ ಗುಂಡು ಹಾರಿಸಿದರು, ಇದರ ಪರಿಣಾಮವಾಗಿ ಜೂನಿಯರ್ ಕಮಿಷನ್ಡ್ ಅಧಿಕಾರಿ ಅಥವಾ ಜೆಸಿಒ ಮತ್ತು ಇತರ ನಾಲ್ಕು ಸೈನಿಕರು ಸಾವನ್ನಪ್ಪಿದರು ಎನ್ನಲಾಗಿದೆ.

ಕೆಲವು ದಿನಗಳ ಹಿಂದೆ ಗಡಿ ನಿಯಂತ್ರಣ ರೇಖೆಯಿಂದ ನುಸುಳಲು ಯಶಸ್ವಿಯಾದ ನಂತರ, ಚಮರ್ ಅರಣ್ಯದಲ್ಲಿ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರ ಗುಂಪು ಇರುವ ಬಗ್ಗೆ ವರದಿಗಳು ಬಂದಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇತ್ತೀಚಿನ ವಾರಗಳಲ್ಲಿ ಕಾಶ್ಮೀರ (Jammu and Kashmir) ಕಣಿವೆಯಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕ ಚಟುವಟಿಕೆ ಮತ್ತು ಪಾಕಿಸ್ತಾನದೊಂದಿಗಿನ ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘನೆಯ ಪುನರುಜ್ಜೀವನದ ನಡುವೆ ಈ ಘಟನೆ ನಡೆದಿದೆ.

Anti Terror Operation: ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಭಾರಿ ಹಿನ್ನಡೆ, ಪೂಂಚ್ ನಲ್ಲಿ JCO ಸೇರಿದಂತೆ ಐವರು ಯೋಧರು ಹುತಾತ್ಮ

ಕಳೆದ ವಾರದಲ್ಲಿ, ಏಳು ನಾಗರಿಕರ ಹತ್ಯೆಗೆ ಪ್ರತಿಕ್ರಿಯೆಯಾಗಿ ಭದ್ರತಾ ಪಡೆಗಳು ಕೇಂದ್ರಾಡಳಿತ ಪ್ರದೇಶದಲ್ಲಿ 900 ಜನರನ್ನು ಬಂಧಿಸಿವೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News