ನವದೆಹಲಿ: ಜನಪ್ರಿಯ ನಟಿ ಖುಷ್ಬೂ ಸುಂದರ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಇಂದು ಬೆಳಿಗ್ಗೆಯಷ್ಟೇ ಕಾಂಗ್ರೆಸ್ ವಕ್ತಾರೆ ಸ್ಥಾನಕ್ಕೆ ಹಾಗೂ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಖುಷ್ಬೂ ಸುಂದರ್ (Khushboo Sundar) ಕೆಲವೇ ಗಂಟೆಗಳ ಬಳಿಕ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (CT Ravi) ಅವರ ಸಮ್ಮುಖದಲ್ಲಿ ಖುಷ್ಬೂ ಬಿಜೆಪಿಗೆ ಸೇರಿಸಿಕೊಂಡರು. ಖುಷ್ಬೂ ಸುಂದರ್ ದೆಹಲಿಯ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಸದಸ್ಯತ್ವವನ್ನು ಪಡೆದರು. ಇದಕ್ಕೂ ಮುನ್ನ ಸೋಮವಾರ ಬೆಳಿಗ್ಗೆ ಅವರು ಸೋನಿಯಾ ಗಾಂಧಿಗೆ ಪತ್ರ ಬರೆದು ಕಾಂಗ್ರೆಸ್ ರಾಜೀನಾಮೆ ನೀಡಿದ್ದರು.
ಅಸಭ್ಯವಾಗಿ ವರ್ತಿಸಿದವನಿಗೆ ಕಪಾಳಮೋಕ್ಷ ಮಾಡಿದ ಖುಷ್ಬೂ
ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಖುಷ್ಬೂ ಬಿಜೆಪಿಯಿಂದ ನನ್ನ ನಿರೀಕ್ಷೆ ನನಗೆ ಯಾವ ಪಕ್ಷವು ಏನು ಮಾಡಲಿದೆ ಎಂಬುದರ ಬಗ್ಗೆ ಅಲ್ಲ, ಆದರೆ ದೇಶದ ಜನರಿಗಾಗಿ ಪಕ್ಷವು ಏನು ಮಾಡಲಿದೆ ಎಂಬುದರ ಬಗ್ಗೆ ಆಗಿದೆ. 128 ಕೋಟಿ ಜನರು ಅನ್ನು ನಿಜವಾಗಿಯೂ ಓರ್ವ ಮನುಷ್ಯನಲ್ಲಿ ನಂಬಿಕೆ ಇಟ್ಟಿದ್ದೀರಿ ಮತ್ತು ಅದು ನಮ್ಮ ಪ್ರಧಾನ ಮಂತ್ರಿ, ಅವರು ಮಾಡುತ್ತಿರುವ ಕೆಲಸ ಸರಿಯಾಗಿದೆ ಎಂದು ನಾನು ನಂಬಿದ್ದೇನೆ ಎಂದಿದ್ದಾರೆ.
My expectation from BJP isn't about what party is going to do for me,but about what party is going to do for ppl of the country. When you've 128 cr ppl actually believing in 1 man & that's our PM, I think they're doing something absolutely right: Khushboo Sundar after joining BJP https://t.co/Aq5aTOxNgF pic.twitter.com/tbtr20Gecu
— ANI (@ANI) October 12, 2020
2014ರಲ್ಲಿ ಡಿಎಂಕೆ ಬಿಟ್ಟು ಕಾಂಗ್ರೆಸ್ ಸೇರಿದ್ದ ನಟಿ:
ರಾಜಕೀಯವಾಗಿ ಮೊದಲಿಗೆ ತಮಿಳುನಾಡಿನ ಡಿಎಂಕೆ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಜನಪ್ರಿಯ ನಟಿ ಖುಷ್ಬೂ ಸುಂದರ್ ಅವರು 2014 ರಲ್ಲಿ ಕಾಂಗ್ರೆಸ್ ಸೇರಿದರು. ಇಂದು ಬೆಳಿಗ್ಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಸೋನಿಯಾ ಗಾಂಧಿಯವರಿಗೆ ನೀಡಿರುವ ರಾಜೀನಾಮೆ ಪತ್ರದಲ್ಲಿ ಪಕ್ಷದಲ್ಲಿ ನನಗೆ ಗುರುತರವಾದ ಜವಾಬ್ಧಾರಿ ನೀಡಿ ದೇಶ ಸೇವೆ ಮಾಡಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದಗಳು. ಕಾಂಗ್ರೆಸ್ ಪಕ್ಷದಲ್ಲಿ ಮೇಲಿನ ಹುದ್ದೆಗಳಲ್ಲಿ ಇರುವವರು ತಳಮಟ್ಟದ ವಾಸ್ತವತೆಯನ್ನು ಅರ್ಥಮಾಡಿಕೊಳ್ಳುತ್ತಿಲ್ಲ. ಪಕ್ಷದಲ್ಲಿ ನಿಷ್ಠಾವಂತರಾಗಿ ದುಡಿಯುತ್ತಿರುವ ಕಾರ್ಯಕತ್ರರಿಗೆ ಸೂಕ್ತವಾದ ಮನ್ನಣೆ ಸಿಗುತ್ತಿಲ್ಲ. ಕಾಂಗ್ರೆಸ್ನಲ್ಲಿ ನಾಯಕತ್ವದ ಕೊರತೆಯಿದೆ ಎಂದು ಉಲ್ಲೇಖಿಸಿರುವುದಷ್ಟೇ ಅಲ್ಲದೆ ಈ ಪಕ್ಷದೊಂದಿಗಿನ ಇಷ್ಟು ದಿನಗಳ ನನ್ನ ಸಂಬಂಧವನ್ನು ಕೊನೆಗೊಳಿಸುತ್ತಿದ್ದೇನೆ ಎಂದು ಬರೆದಿದ್ದಾರೆ.
ಇದಲ್ಲದೆ ಸುದೀರ್ಘವಾದ ವ್ಯಾಪಕ ಆಲೋಚನಾ ಪ್ರಕ್ರಿಯೆಯ ನಂತರ ಕಾಂಗ್ರೆಸ್ ಜೊತೆಗಿನ ಸಂಬಂಧವನ್ನು ಅಂತ್ಯಗೊಳಿಸುವ ನಿರ್ಧಾರಕ್ಕೆ ಬಂದಿರುವುದಾಗಿ ಖುಷ್ಬೂ ಸುಂದರ್ ಹೇಳಿದ್ದಾರೆ.
ಖುಷ್ಬೂ ಸುಂದರ್ ರಾಜೀನಾಮೆ ಪತ್ರ ಸಲ್ಲಿಸುತ್ತಿದ್ದಂತೆಯೇ ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ಕಾಂಗ್ರೆಸ್ ವಕ್ತಾರರ ಹುದ್ದೆಯಿಂದ ತೆಗೆದುಹಾಕಲಾಗಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಮಾಧ್ಯಮ ಉಸ್ತುವಾರಿ ಪ್ರಣಬ್ ಝಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.