ನವದೆಹಲಿ: ಅನಾರೋಗ್ಯದಿಂದ ಕಾರಣದಿಂದ ನಿಧನರಾದ ಕೇಂದ್ರ ಸಚಿವ ಹೆಚ್.ಎನ್.ಅನಂತ್ ಕುಮಾರ್ ನಿರ್ವಹಿಸುತ್ತಿದ್ದ ಖಾತೆಗಳ ಜವಾಬ್ದಾರಿಯನ್ನು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹಾಗೂ ನರೇಂದ್ರ ಸಿಂಗ್ ತೋಮರ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.
ಕೇಂದ್ರ ಸಚಿವ ಅನಂತ್ ಕುಮಾರ್ ನಿರ್ವಹಿಸುತ್ತಿದ್ದ ರಾಸಾಯನಿಕ, ರಸಗೊಬ್ಬರ ಖಾತೆಯನ್ನು ಡಿ.ವಿ.ಸದಾನಂದ ಗೌಡರಿಗೆ ಹಾಗೂ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್, ಗಣಿ ಖಾತೆಗಳನ್ನು ನಿರ್ವಹಿಸುತ್ತಿರುವ ನರೇಂದ್ರ ಸಿಂಗ್ ತೋಮರ್ಗೆ ಸಂಸದೀಯ ವ್ಯವಹಾರಗಳ ಖಾತೆಯನ್ನು ನೀಡಲಾಗಿದೆ.
Union Minister DV Sadananda Gowda assigned the additional charge of the Ministry of Chemicals & Fertilizers & Narendra Singh Tomar assigned the additional charge of the Ministry of Parliamentary Affairs, in addition to their existing portfolios. pic.twitter.com/uaN3RUnBxf
— ANI (@ANI) November 13, 2018
ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಶಿಫಾರಸ್ಸಿಗೆ ರಾಷ್ಟಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.