ನವದೆಹಲಿ:  ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಗುರುವಾರದಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ನಾಯಕ ಶರದ್ ಪವಾರ್ ಅವರನ್ನು ಭೇಟಿ ಮಾಡಿ ಎರಡು ಪಕ್ಷಗಳ ವಿಲೀನ ಸಾಧ್ಯತೆ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.



COMMERCIAL BREAK
SCROLL TO CONTINUE READING

ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಊಹಾಪೋಹಗಳ ಹಿನ್ನಲೆಯಲ್ಲಿ ನಡೆದಿರುವ ಈ ಭೇಟಿಯಲ್ಲಿ ಎನ್ಸಿಪಿ ಮತ್ತು ಕಾಂಗ್ರೆಸ್ ಪಕ್ಷವನ್ನು ಒಂದುಗೂಡಿಸುವ ವಿಚಾರವಾಗಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿಗೆ ನಡೆದ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ ಕೇವಲ 52 ಸ್ಥಾನಗಳನ್ನು ಗೆಲ್ಲುವು ಮೂಲಕ ಕಳಪೆ ಪ್ರದರ್ಶನ ನೀಡಿತ್ತು. ಈ ಹಿನ್ನಲೆಯಲ್ಲಿ ಈಗ ಪಕ್ಷದ ಸೋಲಿನ ಜವಾಬ್ದಾರಿಯನ್ನು ವಹಿಸಿಕೊಂಡಿರುವ ರಾಹುಲ್ ಗಾಂಧಿ ಇತ್ತೀಚಿಗೆ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಜೀನಾಮೆ ನೀಡಿದ್ದರು. ಆದರೆ ಅದನ್ನು ಪಕ್ಷದ ಹಿರಿಯ ನಾಯಕರು ತಿರಸ್ಕರಿಸಿದ್ದರು.ಈಗ ರಾಹುಲ್ ಗಾಂಧಿ ರಾಜೀನಾಮೆಯ ಅನಿಶ್ಚಿತತೆ ಇನ್ನು ಮುಂದುವರೆದಿರುವ ಹಿನ್ನಲೆಯಲ್ಲಿ ನಡೆದಿರುವ ಈ ಸಭೆಯಲ್ಲಿ ಎನ್ಸಿಪಿ -ಕಾಂಗ್ರೆಸ್ ಪಕ್ಷದ ವಿಲೀನದ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.  
 
ಶರದ್ ಪವಾರ್, ಪಿಎ ಸಂಗ್ಮಾ, ತಾರಿಕ್ ಅನ್ವರ್, ಅವರು 1999 ರಲ್ಲಿ ಸೋನಿಯಾ ಗಾಂಧಿಯವರ ವಿದೇಶಿ ಮೂಲವನ್ನು ಪ್ರಶ್ನಿಸಿ ಕಾಂಗ್ರೆಸ್ ನಿಂದ ಹೊರಬಂದು ಎನ್ಸಿಪಿಯನ್ನು ಹುಟ್ಟು ಹಾಕಿದ್ದರು. ತದನಂತರ ಬಂದಂತಹ ಯುಪಿಎ ಸರ್ಕಾರದಲ್ಲಿ ಮೈತ್ರಿ ಪಕ್ಷವಾಗಿ ಅದು ಪಾಲುದಾರವಾಗಿದ್ದನ್ನು ನಾವು ಸ್ಮರಿಸಬಹುದು.