close

News WrapGet Handpicked Stories from our editors directly to your mailbox

ಕೊಯಮತ್ತೂರು ರೈಲ್ವೆ ನಿಲ್ದಾಣದಲ್ಲಿ ಅಂಚೆ ಸೇವಾ ಕಟ್ಟಡ ಕುಸಿದು ಇಬ್ಬರ ಸಾವು

ಕಟ್ಟಡ ಕುಸಿತದ ನಂತರ ತಕ್ಷಣ ಎಚ್ಚೆತ್ತ ರೈಲ್ವೆ ಅಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಕ್ಷಣಾ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶೀಘ್ರ ರಕ್ಷಣಾ ಕಾರ್ಯಾಚರಣೆ ನಡೆಸಿದರು.

Updated: Aug 8, 2019 , 12:50 PM IST
ಕೊಯಮತ್ತೂರು ರೈಲ್ವೆ ನಿಲ್ದಾಣದಲ್ಲಿ ಅಂಚೆ ಸೇವಾ ಕಟ್ಟಡ ಕುಸಿದು ಇಬ್ಬರ ಸಾವು
Pic Courtesy: ANI

ಕೊಯಮತ್ತೂರು: ಕೊಯಮತ್ತೂರಿನಲ್ಲಿ ಬುಧವಾರ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ಭಾರಿ ಮಳೆಯಿಂದಾಗಿ ಕೊಯಮತ್ತೂರು ರೈಲ್ವೆ ನಿಲ್ದಾಣದಲ್ಲಿ ಕಟ್ಟಡ ಕುಸಿದು ಕನಿಷ್ಠ 2 ಜನರು ಮೃತಪಟ್ಟಿದ್ದಾರೆ. ರೈಲ್ವೆ ಪಾರ್ಸೆಲ್ ಸೇವಾ ಕಟ್ಟಡ ಗುರುವಾರ ಮುಂಜಾನೆ 4 ಗಂಟೆ ಸುಮಾರಿಗೆ ಕುಸಿದಿದೆ. 

ವರದಿಗಳ ಪ್ರಕಾರ,  ಮೃತರನ್ನು ಮೆಟ್ಟುಪಾಳಯಂ ನಿವಾಸಿಗಳೆಂದು ಗುರುತಿಸಲಾಗಿದ್ದು, ಅವರಿಬ್ಬರೂ ಕಾರ್ಮಿಕರು ಎನ್ನಲಾಗಿದೆ.

ಕಟ್ಟಡ ಕುಸಿತದ ನಂತರ ತಕ್ಷಣ ಎಚ್ಚೆತ್ತ ರೈಲ್ವೆ ಅಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಕ್ಷಣಾ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶೀಘ್ರ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಗಾಯಾಳುಗಳನ್ನು ಕೊಯಮತ್ತೂರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ.