ನವದೆಹಲಿ: ಪುಲ್ವಾಮಾ ಭಯೋತ್ಪಾದನಾ ದಾಳಿಯ ನಂತರ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಯಾವುದೇ ಬೆದರಿಕೆ ಆಥವಾ ಹಲ್ಲೆಗಳಾದ ವರದಿಗಳನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ತಳ್ಳಿ ಹಾಕಿದ್ದಾರೆ.


COMMERCIAL BREAK
SCROLL TO CONTINUE READING

ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ದಾಳಿಯಿಂದಾಗಿ ಸುಮಾರು 40 ಸೈನಿಕರು ಹುತಾತ್ಮರಾಗಿದ್ದರು.ಇದಾದ ಬೆನ್ನಲ್ಲೇ ದೇಶಾದ್ಯಂತ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಆದ ದಾಳಿಯ ವಿಚಾರವಾಗಿ ಸಚಿವರಿಗೆ ಪ್ರಶ್ನಿಸಿದಾಗ "ಕಾಶ್ಮೀರಿ ವಿದ್ಯಾರ್ಥಿಗಳಿಗೆ ಯಾವುದೇ ಅಪಾಯವಿಲ್ಲ. ಪುಲ್ವಾಮಾ ದಾಳಿಯ ನಂತರ ಕಾರಣ ಜನರು ಕೋಪಗೊಂಡಿದ್ದಾರೆ ಹೊರತು  ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಯಾವುದೇ ಆಕ್ರಮಣ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.


ಜಮ್ಮು ಮತ್ತು ಕಾಶ್ಮೀರದ ಆಡಳಿತವು ಸೋಮವಾರ ರಾಜ್ಯದಿಂದ ಹೊರಬಂದ ವಿದ್ಯಾರ್ಥಿಗಳಿಗೆ ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ, ಕಾಶ್ಮೀರಿಗಳ ಸುರಕ್ಷತೆ ಮತ್ತು ಭದ್ರತೆಗಾಗಿ ಕ್ರಮಗಳನ್ನು ಕೈಗೊಳ್ಳಲು ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಮತ್ತು ಕೇಂದ್ರ ಪ್ರದೇಶಗಳಿಗೆ ಸಲಹೆ ನೀಡಿದೆ ಎನ್ನಲಾಗಿದೆ.