ನವದೆಹಲಿ : ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮಂಡಿಸಿದ ಬಜೆಟ್ ಇದಲ್ಲ. ಬದಲಾಗಿ ದೇಶದ ಹಿತ, ಬಡವರ ಹಿತದೃಷ್ಟಿ ಹಾಗೂ ಅಭಿವೃದ್ಧಿಪರ ಬಜೆಟ್ ಆಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಬಜೆಟ್ ಮಂಡನೆ ಬಳಿಕ ಮಾತನಾಡಿರುವ ಸಚಿವರು, ದೇಶದ ಹಣಕಾಸಿನ ಭದ್ರತೆ ಜೊತೆಗೆ ಅಭಿವೃದ್ಧಿಪರವಾಗಿ ಇರುವಂಥ ಮಧ್ಯಂತರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ. ಲೋಕಸಭೆ ಚುನಾವಣೆ ಪ್ರೇರಿತವಾಗಿ ಏನು ಬೇಕಾದರೂ ಮಾಡಬಹುದಾಗಿತ್ತು. ಆದರೆ, ಹಾಗೆ ಮಾಡದೆ ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ವಸತಿ, ಆರೋಗ್ಯ, ರಸ್ತೆ, ಸಾರಿಗೆ ಹೀಗೆ ಮೂಲ ಸೌಕರ್ಯಕ್ಕೆ ಒತ್ತು ಕೊಟ್ಟು ಮಂಡಿಸಿದಂತಹ ಮುಂಗಡ ಪತ್ರವಾಗಿದೆ ಎಂದು ಸಚಿವ ಜೋಶಿ ಸಮರ್ಥಿಸಿಕೊಂಡಿದ್ದಾರೆ.


ಇದನ್ನೂ ಓದಿ:ʼಪ್ರಧಾನ ಮಂತ್ರಿ ಜನ್-ಧನ್ ಯೋಜನೆʼ ಮೂಲಕ ಜನರಿಗೆ ನೇರ ಲಾಭ ವರ್ಗಾವಣೆ


ಈ ವಿಕಸಿತ ಭಾರತ ಬಜೆಟ್‌ನಲ್ಲಿ ಘೋಷಿಸಿದಂತೆ ರೈಲ್ವೆ ಕಾರಿಡಾರ್ ಕಾರ್ಯಕ್ರಮ ಕಲ್ಲಿದ್ದಲು ಸಚಿವಾಲಯದ ಫಸ್ಟ್ ಮೈಲ್ ಕನೆಕ್ಟಿವಿಟಿ ಯೋಜನೆಗಳಿಗೆ ಪೂರಕವಾಗಿದೆ. ವಿತ್ತ ಸಚಿವರು ಕೃಷಿ, ಮೀನುಗಾರಿಕೆ, ಆರೋಗ್ಯ ಕ್ಷೇತ್ರಗಳಿಗೆ ಸಾಕಷ್ಟು ಒತ್ತು ಕೊಟ್ಟಿದ್ದಾರೆ. 11.11 ಲಕ್ಷ ಕೋಟಿ ರೂಪಾಯಿ ಮೂಲಭೂತ ಸೌಕರ್ಯಗಳಿಗೆ ಮೀಸಲಿಟ್ಟಿರುವುದು ಗಮನಾರ್ಹವಾಗಿದೆ ಎಂದಿದ್ದಾರೆ.


ರಾಷ್ಟ್ರೀಯ ಮಿಷನ್ ದಾಖಲೆ ಸಿದ್ಧ;  ಕೇಂದ್ರ ಸರ್ಕಾರ 2030ರ ವೇಳೆಗೆ 100 ಮಿಲಿಯನ್ ಟನ್ ಕಲ್ಲಿದ್ದಲು ಅನಿಲೀಕರಣಕ್ಕಾಗಿ ರಾಷ್ಟ್ರೀಯ ಮಿಷನ್ ದಾಖಲೆ ಸಿದ್ಧಪಡಿಸಿದೆ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಖಾತೆ ನಿರ್ವಹಿಸುತ್ತಿರುವ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.


ಇದನ್ನೂ ಓದಿ:ಮುಂದಿನ 5 ವರ್ಷಗಳಲ್ಲಿ 3ಕೋಟಿ ಮನೆಗಳ ನಿರ್ಮಾಣ


ಸುಸ್ಥಿರ ಬಳಕೆಗಾಗಿ ಕಲ್ಲಿದ್ದಲಿನ ವೈವಿಧ್ಯೀಕರಣದತ್ತ ಸಾಗುತ್ತಿದ್ದೇವೆ. ಜಾಗತಿಕವಾಗಿ ಬೆಳೆಯುತ್ತಿರುವ ಪರಿಸರ ಕಾಳಜಿ ಮತ್ತು ಭಾರತ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ವಿಸ್ತರಿಸುವ ಗುರಿಯೊಂದಿಗೆ ಹೆಜ್ಜೆ ಹಾಕಿದ್ದೇವೆ ಎಂದು ಪ್ರತಿಪಾದಿಸಿದ್ದಾರೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರ ದೂರದೃಷ್ಟಿ, ಪ್ರೋತ್ಸಾಹದ  ಕಾರಣ ನಾವಿಂದು ಸ್ವಾವಲಂಬಿ ಭಾರತದತ್ತ ಸಾಗಿದ್ದೇವೆ ಎಂದು ಜೋಶಿ ಹೆಮ್ಮೆ ವ್ಯಕ್ತಪಡಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.