ನವದೆಹಲಿ : 2024 ರ ರಾಷ್ಟ್ರೀಯ ಚುನಾವಣೆಗೆ ಮುನ್ನ ರಾಜಕೀಯ ಸವಾಲುಗಳನ್ನು ಎದುರಿಸಲು ಉದ್ದೇಶಿಸಿರುವ ತನ್ನ "Empowered Action Group" ಭಾಗವಾಗಿ ಪಕ್ಷಕ್ಕೆ ಸೇರುವ ಕಾಂಗ್ರೆಸ್ ಪ್ರಸ್ತಾಪವನ್ನು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ತಿರಸ್ಕರಿಸಿದ್ದಾರೆ. ಪಕ್ಷಕ್ಕೆ ಪುನಶ್ಚೇತನ ನೀಡಲು ಪಕ್ಷವು ಅವರಿಗೆ ಮುಕ್ತ ಹಸ್ತವನ್ನು ನೀಡಲು ನಿರಾಕರಿಸಿದೆ ಎಂದು ಮೂಲಗಳು ಸೂಚಿಸಿವೆ.


COMMERCIAL BREAK
SCROLL TO CONTINUE READING

"ಕಾಂಗ್ರೆಸ್ ಅಧ್ಯಕ್ಷರ ಜೊತೆ ಪ್ರಶಾಂತ್ ಕಿಶೋರ್ ಅವರೊಂದಿಗೆ ಚರ್ಚಿಸಿ 2024 ರ ಚುನಾವಣೆಯ ಅಧಿಕಾರಯುತ ಕ್ರಿಯಾ ಗುಂಪನ್ನು ರಚಿಸಿದ್ದಾರೆ ಮತ್ತು ನಿರ್ದಿಷ್ಟ ಜವಾಬ್ದಾರಿಯೊಂದಿಗೆ ಗುಂಪಿನ ಭಾಗವಾಗಿ ಪಕ್ಷಕ್ಕೆ ಸೇರಲು ಅವರನ್ನು ಆಹ್ವಾನಿಸಿತ್ತು. ಆದ್ರೆ, ಪ್ರಶಾಂತ್ ಕಿಶೋರ್ ಅವರು ಕಡಾಖಂಡಿತವಾಗಿ ನಿರಾಕರಿಸಿದ್ದಾರೆ. ಪಕ್ಷಕ್ಕೆ ನೀಡಿದ ಸಲಹೆಯನ್ನು ನಾವು ಪ್ರಶಂಸಿಸುತ್ತೇವೆ, ಎಂದು ಪಕ್ಷದ ಹಿರಿಯ ನಾಯಕ ರಣದೀಪ್ ಸುರ್ಜೇವಾಲಾ ಟ್ವೀಟ್ ಮಾಡಿದ್ದಾರೆ.


ಐದು ವರ್ಷದ ಮಕ್ಕಳಿಗೆ ಈ ವ್ಯಾಕ್ಸಿನ್ ನೀಡಲಾಗುವುದು


PK ಆಧಾರದ ಮೇಲೆ 2024 ರ ಚುನಾವಣೆ?


ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ಪ್ರಶಾಂತ್ ಕಿಶೋರ್ ವಹಿಸಿಕೊಳ್ಳಬಹುದೆಂಬ ಚರ್ಚೆ ನಡೆಯುತ್ತಿತ್ತು. ಅವರು ಪಕ್ಷದ ಹೈಕಮಾಂಡ್ ಮುಂದೆ 18 ಗಂಟೆಗಳ ಚರ್ಚೆಮಡಿದ ನಂತರ ಈ ಬಗ್ಗೆ ಊಹಾಪೋಹ ಹುಟ್ಟಿಕೊಂಡವು. ಪಿಕೆ ತಂತ್ರದ ಪ್ರಕಾರ 2024ರ ಚುನಾವಣೆಯನ್ನು ಎದುರಿಸಲು ಪಕ್ಷ ಸಿದ್ಧತೆ ನಡೆಸಿದೆ ಎಂದು ಚರ್ಚಿಸಲಾಯಿತು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.