ಮಮತಾ ಬ್ಯಾನರ್ಜೀ ಭೇಟಿ ಮಾಡಿದ ಪ್ರಶಾಂತ್ ಕಿಶೋರ್

 ಚುನಾವಣಾ ರಣತಜ್ಞ ಪ್ರಶಾಂತ್ ಕಿಶೋರ್ ಗುರುವಾರದಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಅವರನ್ನು ಭೇಟಿ ಮಾಡಿದ್ದಾರೆ.

Last Updated : Jun 27, 2019, 08:44 PM IST
 ಮಮತಾ ಬ್ಯಾನರ್ಜೀ ಭೇಟಿ ಮಾಡಿದ ಪ್ರಶಾಂತ್ ಕಿಶೋರ್  title=
photo:ANI

ನವದೆಹಲಿ : ಚುನಾವಣಾ ರಣತಜ್ಞ ಪ್ರಶಾಂತ್ ಕಿಶೋರ್ ಗುರುವಾರದಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಅವರನ್ನು ಭೇಟಿ ಮಾಡಿದ್ದಾರೆ.

ಈಗ 2021 ರಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಇರುವುದರಿಂದ ಈಗ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಚುನಾವಣಾ ತಂತ್ರಜ್ಞ ಪ್ರಶಾಂತ ಕಿಶೋರ್ ಅವರ ಮೊರೆ ಹೋಗಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಗುರುವಾರದಂದು ಈ ತಿಂಗಳಲ್ಲಿ ಎರಡನೇ ಬಾರಿಗೆ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. 

ಪ್ರಶಾಂತ್ ಕಿಶೋರ್ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ರಾಜ್ಯ ಸಚಿವಾಲಯ 'ನಬಣ್ಣ'ದಲ್ಲಿ ಭೇಟಿಯಾದರು. ಸಭೆಯಲ್ಲಿ ಟಿಎಂಸಿ ಸಂಸದ ಮತ್ತು ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಕೂಡ ಹಾಜರಿದ್ದರು ಎನ್ನಲಾಗಿದೆ. ಇದಕ್ಕೂ ಮೊದಲು ಅವರು ಜೂನ್ 6 ರಂದು ಸಭೆ ನಡೆಸಿದ್ದರು.

2019 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ನೇತೃತ್ವದ ಬಿಜೆಪಿ ಬಂಗಾಳದಲ್ಲಿ 18 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಈಗ ಬಂಗಾಳದಲ್ಲಿ ಎರಡನೇ ಸ್ಥಾನದಲ್ಲಿದೆ. ಇನ್ನೊಂದೆಡೆಗೆ ಟಿಎಂಸಿ 2014 ರಲ್ಲಿ 34 ಸ್ಥಾನಗಳಿಂದ 22 ಕ್ಕೆ ಇಳಿದಿದೆ. ಇದರಿಂದ ಈಗ ಟಿಎಂಸಿಗೆ ಎಚ್ಚರಿಕೆ ಗಂಟೆಯಾಗಿದೆ.

ಪ್ರಶಾಂತ್ ಕಿಶೋರ್ ಈ ಹಿಂದೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರವನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಇತ್ತೀಚಿಗೆ ಆಂಧ್ರಪ್ರದೇಶದಲ್ಲಿ ವೈಎಸ್‌ಆರ್‌ಸಿಪಿ ಮುಖ್ಯಸ್ಥ ಜಗನ್‌ಮೋಹನ್ ರೆಡ್ಡಿ ಅವರ ಗೆಲುವಿಗೆ ಸಹಾಯ ಮಾಡಿದ್ದರು.

Trending News