ಕೋಲ್ಕತ್ತಾ: 2014ರ ಲೋಕಸಭಾ ಚುನಾವಣೆಯಲ್ಲಿ ಪಿಎಂ ನರೇಂದ್ರ ಮೋದಿ ಅವರ ವಿಜಯದ ಪ್ರಮುಖ ರೂವಾರಿಯಾಗಿದ್ದ ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಈಗ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಲಹೆಗಾರರಾಗುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.


COMMERCIAL BREAK
SCROLL TO CONTINUE READING

ಈ ಹಿನ್ನೆಲೆಯಲ್ಲಿ ಪ್ರಶಾಂತ್ ಕಿಶೋರ್ ಗುರುವಾರ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಬಿಜೆಪಿಗೆ ಇದೊಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. 


ಗುರುವಾರ, ಪ್ರಶಾಂತ್ ಕಿಶೋರ್ ಕೋಲ್ಕತ್ತಾದಲ್ಲಿ ಕೋಲ್ಕತಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರನ್ನು ಭೇಟಿಯಾದರು. ಮೂಲಗಳ ಪ್ರಕಾರ, ಪ್ರಶಾಂತ ಕಿಶೋರ್ ಕೇಂದ್ರ ಸಚಿವಾಲಯದಲ್ಲಿ ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸುಮಾರು 1 ಗಂಟೆ 40 ನಿಮಿಷಗಳ ಕಾಲ ದೀದಿ ಜೊತೆಗೆ ಕಿಶೋರ್ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. 2021 ರಲ್ಲಿ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಮೊದಲು, ತೃಣಮೂಲ ಕಾಂಗ್ರೆಸ್ ಪ್ರಶಾಂತ್ ಕಿಶೋರ್ ಅವರನ್ನು ಸಂಪರ್ಕಿಸಬಹುದು. ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಅವರು ಮಮತಾ ಅವರಿಗೆ ಕಾರ್ಯತಂತ್ರ ರೂಪಿಸಲು ನೆರವಾಗಲಿದ್ದಾರೆ ಎಂದು ನಂಬಲಾಗಿದೆ.


ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದ ಪ್ರಶಾಂತ್ ಕಿಶೋರ್, ನಿತೀಶ್ ಅವರಿಗೆ ಆತ್ಮೀಯರಾಗಿದ್ದರು. ಆದರೆ ಕಳೆದ ಕೆಲ ದಿನಗಳಿಂದ ಇಬ್ಬರ ನಡುವೆ ಹೊಂದಾಣಿಕೆಯಾಗುತ್ತಿಲ್ಲ ಎನ್ನಲಾಗಿದೆ. 


ಆಂಧ್ರಪ್ರದೇಶದಲ್ಲಿ ಜಗನ್ ಗೆಲುವಿನ ಹಿಂದೆ ಪ್ರಶಾಂತ್:
ಆಂಧ್ರಪ್ರದೇಶದಲ್ಲಿ ಇತ್ತೀಚಿಗೆ ನಡೆದ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್‍ಆರ್ ಕಾಂಗ್ರೆಸ್ ಪಕ್ಷ ಅದ್ಭುತ ಗೆಲುವು ಸಾಧಿಸಿದೆ. ಜಗನ್‍ಮೋಹನ್ ರೆಡ್ಡಿ ಅವರ ಶ್ರಮ ಹಾಗೂ ಪ್ರಶಾಂತ್ ತಂತ್ರಗಾರಿಕೆ ಪರಿಣಾಮ ವೈಎಸ್‍ಆರ್ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದೆ.