ಉತ್ತರ ಪ್ರದೇಶ : ಮೂರು ತಿಂಗಳ ಗರ್ಭಿಣಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಭೀಕರ ಘಟನೆ ಸೆಪ್ಟೆಂಬರ್ 13 ರಂದು ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದ್ದು, ಮಹಿಳೆಗೆ ಗರ್ಭಪಾತವಾಗಿದೆ ಎಂದು ವರದಿಯಾಗಿದೆ.
ಮಹಿಳೆಯು ಬಿಷರತ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಳು. ಆಕೆಯ ಗಂಡನ ದೂರಿನ ಪ್ರಕಾರ, ಮೂವರು ಪುರುಷರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ನಡೆದ ದಿನ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಭಾರತದ ಸೋಲಿನ ಮಧ್ಯ ಸೂರ್ಯಕುಮಾರ್ ಯಾದವ್ಗೆ 'ಭರ್ಜರಿ ಸಿಹಿ ಸುದ್ದಿ'!
ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ರಾಜ್‌ಕುಮಾರ್ ಅಗರವಾಲ್ ಪ್ರಕಾರ, ವಿಚಾರಣೆ ನಡೆಸಿ ಸತ್ಯಾಸತ್ಯಗಳನ್ನು ತಿಳಿದ ನಂತರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಸೆಪ್ಟೆಂಬರ್ 16 ರಂದು ಮಹಿಳೆಯ ಪತಿ ಬರೇಲಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಎಂದು ಬಿಷರತ್‌ಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ರಾಜೇಶ್ ಕುಮಾರ್ ಹೇಳಿದ್ದಾರೆ. ಆದರೆ, ಘಟನೆ ನಡೆದ ದಿನವೇ ದೂರು ನೀಡಿದರೂ ಸಹ ಪೊಲೀಸರು ಕ್ರಮ ಕೈಗೊಳ್ಳಲಿಲ್ಲ ಎಂದು ಮಹಿಳೆಯ ಪತಿ ದೂರಿದ್ದಾರೆ.
ಸದ್ಯ ಮಹಿಳೆಯ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆ ಆಕೆಯನ್ನು ಜಿಲ್ಲಾಸ್ಪತ್ರೆಗೆ ಕರೆತಂದು ಅಲ್ಲಿ ಪೋಸ್ಟಲ್ ದೂರು ದಾಖಲಿಸಿದ್ದಾರೆ. ಪೊಲೀಸರು ಮಂಗಳವಾರ (ಸೆ.20)ದಿಂದ ತನಿಖೆ ಆರಂಭಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.