Draupadi Murmu: ಕರ್ನಾಟಕದ ಅಪರಾಧ ವಿಧೇಯಕಕ್ಕೆ ರಾಷ್ಟ್ರಪತಿ ಮುರ್ಮು ಅಂಕಿತ
ಕರ್ನಾಟಕದ ತಿದ್ದುಪಡಿ ಮಸೂದೆ ‘ದ ಕೋಡ್ ಆಫ್ ಕ್ರಿಮಿನಲ್ ಪ್ರೊಸೀಜರ್-2021’ಗೆ ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿತ್ತು.
ನವದೆಹಲಿ: ಕರ್ನಾಟಕದ ಅಪರಾಧ ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ.
ಅಪರಾಧ ಪ್ರಕರಣಗಳಲ್ಲಿ ಆರೋಪಿ ತಪ್ಪಿಸಿಕೊಂಡಿದ್ದರೂ ವಿದ್ಯುನ್ಮಾನ ಸಾಧನ ಬಳಸಿ, ಸಾಕ್ಷಿಗಳ ಹೇಳಿಕೆಗಳನ್ನು ಆಡಿಯೋ ಮತ್ತು ವಿಡಿಯೋ ಮಾರ್ಗವಾಗಿಯೂ ಪಡೆದುಕೊಳ್ಳಬಹುದು. ಈ ವೇಳೆ ಆರೋಪಿ ಪರ ವಕೀಲರು ಹಾಜರಿದ್ದರೆ ಸಾಕು.
ಇದನ್ನೂ ಓದಿ: NRI: ಅನಿವಾಸಿ ಭಾರತೀಯರಿಗೆ ಸೂಪರ್ ನ್ಯೂಸ್: 7 ದೇಶಗಳಲ್ಲಿ ಐಐಟಿ ತೆರೆಯುವ ಯೋಜನೆ
ಇದಲ್ಲದೇ ಆರೋಪಿಯ ಗೈರಿನಲ್ಲೇ ವಿಚಾರಣೆ ನಡೆಸಿ, ಶಿಕ್ಷೆಯನ್ನೂ ಪ್ರಕಟಿಸಬಹುದು. ಈ ಕುರಿತ ಕರ್ನಾಟಕದ ತಿದ್ದುಪಡಿ ಮಸೂದೆ ‘ದ ಕೋಡ್ ಆಫ್ ಕ್ರಿಮಿನಲ್ ಪ್ರೊಸೀಜರ್-2021’(The Code of Criminal Procedure (Amendment) Bill, 2021)ಗೆ ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿತ್ತು.
ಇಲ್ಲಿಯವರೆಗೆ ನ್ಯಾಯಾಲಯದ ಕಲಾಪ ನಡೆಯುತ್ತಿರುವ ವೇಳೆಯಲ್ಲಿ ಮಾತ್ರ ಸಾಕ್ಷಿಗಳ ವಿಚಾರಣೆ ನಡೆಸಿ, ಅವರ ಹೇಳಿಕೆ ದಾಖಲಿಸಿಕೊಳ್ಳಬಹುದಾಗಿತ್ತು. ಇದೂ ಸಹ ಆರೋಪಿ ಬಂಧನಕ್ಕೊಳಗಾಗಿದ್ದರೆ ಮಾತ್ರ ಸಾಧ್ಯವಿತ್ತು.
ಇದನ್ನೂ ಓದಿ: Viral Video: ಮನೆಯ ಮಹಡಿಯ ಮೇಲೆ ಕುಳಿತು ಬಟ್ಟೆ ವಾಶ್ ಮಾಡಿದ ಕೋತಿ...ವಿಡಿಯೋ ನೋಡಿ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.