ರಾಷ್ಟ್ರಪತಿ ಚುನಾವಣೆ: ದೇಶದ 15ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಮತದಾನ
President Election 2022: ದೇಶದ 15ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಮತದಾನ ನಡೆಯಲಿದ್ದು, ದೇಶದ 4,800 ಸಂಸದರು, ಶಾಸಕರು ಮತ ಚಲಾಯಿಸಲಿದ್ದಾರೆ. ಸಂಸತ್ ಭವನ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮತದಾನ ನಡೆಯಲಿದೆ.
ರಾಷ್ಟ್ರಪತಿ ಚುನಾವಣೆ 2022: ಭಾರತದ 15ನೇ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಸೋಮವಾರ ಸುಮಾರು 4,800 ಸಂಸದರು ಮತ್ತು ಶಾಸಕರು ಮತ ಚಲಾಯಿಸಲಿದ್ದಾರೆ. ರಾಷ್ಟ್ರಪತಿ ಚುನಾವಣೆಗಾಗಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಕಣದಲ್ಲಿದ್ದರೆ, ಪ್ರತಿಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಕಣದಲ್ಲಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ಸಂಸತ್ ಭವನ ಮತ್ತು ರಾಜ್ಯ ಶಾಸಕಾಂಗಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಜುಲೈ 21 ರಂದು ಮತ ಎಣಿಕೆ ನಡೆಯಲಿದ್ದು, ಜುಲೈ 25 ರಂದು ದೇಶದ ಮುಂದಿನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಸ್ತುತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳಲಿದೆ.
ಇದನ್ನೂ ಓದಿ- ದೇಶದ ಪ್ರಥಮ ಪ್ರಜೆಯ ಸಂಬಳ ಎಷ್ಟು ಗೊತ್ತಾ? ಅವರಿಗೆ ಸಿಗೋ ಸೌಲಭ್ಯಗಳ ಬಗ್ಗೆ ಕೇಳಿದ್ರೆ ದಂಗಾಗುತ್ತೀರ!
ಪ್ರಾದೇಶಿಕ ಪಕ್ಷಗಳಾದ ಬಿಜೆಡಿ, ವೈಎಸ್‌ಆರ್‌ಸಿಪಿ, ಬಿಎಸ್‌ಪಿ, ಎಐಎಡಿಎಂಕೆ, ಟಿಡಿಪಿ, ಜೆಡಿ (ಎಸ್), ಶಿರೋಮಣಿ ಅಕಾಲಿದಳ, ಶಿವಸೇನೆ ಮತ್ತು ಈಗ ಜೆಎಂಎಂ ಬೆಂಬಲದೊಂದಿಗೆ ದ್ರೌಪದಿ ಮುರ್ಮು ಅವರ ಮತಗಳ ಪ್ರಮಾಣವು ಸುಮಾರು ಮೂರನೇ ಎರಡರಷ್ಟು ತಲುಪುವ ಸಾಧ್ಯತೆಯಿದೆ. ದ್ರೌಪದಿ ಮುರ್ಮು ಅವರು ದೇಶದ ನೂತನ ರಾಷ್ಟ್ರಪತಿ ಆಗಿ ಆಯ್ಕೆ ಆದರೆ ಬುಡಕಟ್ಟು ಸಮುದಾಯದಿಂದ ಉನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಕೀರ್ತಿಗೆ ಪಾತ್ರರಾಗಲಿದ್ದಾರೆ.
ಒಟ್ಟು 10,86,431 ಮತಗಳ ಪೈಕಿ ವಿವಿಧ ಪ್ರಾದೇಶಿಕ ಪಕ್ಷಗಳ ಬೆಂಬಲದ ನಂತರ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಅಭ್ಯರ್ಥಿ ಈಗ 6.67 ಲಕ್ಷಕ್ಕೂ ಹೆಚ್ಚು ಮತಗಳನ್ನು ಹೊಂದಿದೆ.
ಇದನ್ನೂ ಓದಿ- Mukhtar Abbas Naqvi : 'ನಾನು ಮುಸ್ಲಿಂರಿಗಾಗಿ ಮಾತ್ರ ಕೆಲಸ ಮಾಡುತ್ತೇನೆ ಎಂದು ಪ್ರಮಾಣ ಮಾಡಿಲ್ಲ'
ಅನುಪಾತದ ಪ್ರಾತಿನಿಧ್ಯದ ವ್ಯವಸ್ಥೆಯ ಮೂಲಕ ರಾಷ್ಟ್ರಪತಿ ಅವರನ್ನು ಚುನಾಯಿತ ಸಂಸದರು ಮತ್ತು ರಾಜ್ಯ ಶಾಸಕಾಂಗ ಸಭೆಗಳ ಸದಸ್ಯರು ಮತ ಚಲಾಯಿಸುವ ಹಕ್ಕನ್ನು ಹೊಂದಿರುತ್ತಾರೆ. ನಾಮನಿರ್ದೇಶಿತ ಸಂಸದರು ಮತ್ತು ಶಾಸಕರು ಮತ್ತು ವಿಧಾನ ಪರಿಷತ್ತಿನ ಸದಸ್ಯರು ಈ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಲ್ಲ ಎಂಬುದು ಗಮನಾರ್ಹ ಸಂಗತಿ.
ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಸಕಾಂಗ ಸಭೆ ಇಲ್ಲದ ಕಾರಣ ಈ ಬಾರಿಯ ರಾಷ್ಟ್ರಪತಿ ಚುನಾವಣೆಯಲ್ಲಿ ಸಂಸತ್ತಿನ ಸದಸ್ಯರ ಮತದ ಮೌಲ್ಯ 708 ರಿಂದ 700 ಕ್ಕೆ ಇಳಿದಿದೆ. ಪ್ರತಿ ಶಾಸಕರ ಮತದ ಮೌಲ್ಯವು ವಿವಿಧ ರಾಜ್ಯಗಳಲ್ಲಿ ಬದಲಾಗುತ್ತದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.