ಹೊಸ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಯವರನ್ನ ಆಹ್ವಾನಿಸಲಿಲ್ಲ : ಸನಾತನ ಜಾತಿ ತಾರತಮ್ಯಕ್ಕೆ ಅತ್ಯುತ್ತಮ ಉದಾಹರಣೆ
Sanatana Dharma row : ಸನಾತನ ಧರ್ಮ ಹೇಳಿಕೆ ನೀಡಿ ವಿರೋಧಕ್ಕೆ ಗುರಿಯಾಗಿರುವ ತಮಿಳುನಾಡು ಸಚಿವ, ನಟ ಉದಯನಿಧಿ ಇದೀಗ ಮತ್ತೊಮ್ಮೆ ಧ್ವನಿ ಎತ್ತಿದ್ದಾರೆ. ನೂತನ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
Udayanidhi Stalin : ತಮಿಳುನಾಡು ಮುಖ್ಯಮಂತ್ರಿ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಕಾರ್ಯಕ್ರಮವೊಂದರಲ್ಲಿ ಸನಾತನ ಧರ್ಮ ಕುರಿತು ಹೇಳಿಕೆ ನೀಡಿರುವುದು ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಅಯೋಧ್ಯೆಯ ಸನ್ಯಾಸಿಯೊಬ್ಬರು ಸ್ಟಾಲಿನ್ ತಲೆ ಕತ್ತರಿಸಿದರೆ 10 ಕೋಟಿ ನೀಡುವುದಾಗಿ ಘೋಷಿಸಿದರು. ಇದೀಗ ಉದಯನಿಧಿ ಮತ್ತೆ ಧ್ವನಿ ಎತ್ತಿದ್ದಾರೆ.
ಹೌದು.... ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಅದನ್ನ ಸಂಪೂರ್ಣವಾಗಿ ನಿರ್ನಾಮ ಮಾಡಬೇಕು ಅಂತ ಉದಯನಿಧಿ ಹೇಳಿದ್ದರು. ಈ ಹೇಳಿಕೆಗೆ ಬಿಜೆಪಿ ಸೇರಿದಂತೆ ಅನೇಕ ಹಿಂದೂ ಪರ ಸಂಘಟನೆಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದವು. ಇದರ ಬೆನ್ನಲ್ಲೆ ತಮ್ಮ ಹೇಳಿಕೆಯನ್ನು ಸರ್ಮರ್ಥಿಸಿಕೊಂಡಿದ್ದಾರೆ ಉದಯನಿಧಿ ಸ್ಟಾಲಿನ್.
ಇದನ್ನೂ ಓದಿ: ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಅದನ್ನು ಯಾರು ಸೃಷ್ಟಿಸಿದವರು..? : ಗೃಹ ಸಚಿವರ ಪ್ರಶ್ನೆ
ಸಾಂಪ್ರದಾಯಿಕತೆ ಎಂದರೆ ಎಲ್ಲರನ್ನೂ ಸಮಾನವಾಗಿ ಕಾಣುವುದು ಎಂದು ಹೇಳುವ ಮೂಲಕ ಮತ್ತೊಮ್ಮೆ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ನೂತನ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಿಲ್ಲ ಇದು ಸನಾತನ ಆಚರಣೆಗಳಲ್ಲಿ ಜಾತಿ ತಾರತಮ್ಯಕ್ಕೆ ಅತ್ಯುತ್ತಮ ಉದಾಹರಣೆ ಎಂದು ಉದಯನಿಧಿ ಹೇಳಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.