ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ನೇಮಕ; ನೂತನ ಸರ್ಕಾರ ರಚನೆಗೆ ರಾಷ್ಟ್ರಪತಿ ಸೂಚನೆ

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಭಾರತದ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಅವರನ್ನು ನೇಮಕ ಮಾಡಿದ್ದಾರೆ. 

Last Updated : May 25, 2019, 11:19 PM IST
ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ನೇಮಕ; ನೂತನ ಸರ್ಕಾರ ರಚನೆಗೆ ರಾಷ್ಟ್ರಪತಿ ಸೂಚನೆ

ನವದೆಹಲಿ: 2019ರ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದಿರುವ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಸಂಸದೀಯ ನಾಯಕ ನರೇಂದ್ರ ಮೋದಿ ಅವರನ್ನು ಭಾರತದ ಪ್ರಧಾನಿಯಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಶನಿವಾರ ನೇಮಕ ಮಾಡಿದ್ದಾರೆ.

"ಭಾರತದ ಸಂವಿಧಾನದ 75(1) ನೇ ಅಧಿನಿಯಮದ ಪ್ರಕಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಭಾರತದ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಅವರನ್ನು ನೇಮಕ ಮಾಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಶಪಥ ಸಮಾರಂಭದ ದಿನಾಂಕ ಮತ್ತು ಸಮಯವನ್ನು ಹಾಗೂ ಕೇಂದ್ರ ಸಚಿವ ಸಂಪುಟಕ್ಕೆ ಸದಸ್ಯರನ್ನು ನೇಮಕ ಮಾಡಲು ಹೆಸರುಗಳ ಬಗ್ಗೆ ನಿರ್ಧರಿಸಲು ಸೂಚನೆ ನೀಡಿದರು" ಎಂದು ರಾಷ್ಟ್ರಪತಿ ಭವನದ ಹೇಳಿಕೆ ತಿಳಿಸಿದೆ. 

ಇದಕ್ಕೂ ಮುನ್ನ, ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟದ ಸಂಸದೀಯ ಮಂಡಳಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ ಎನ್‍ಡಿಎ ನಿಯೋಗ ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿರುವ ಪತ್ರ ಸಲ್ಲಿಸಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ಅಕಾಲಿ ದಳದ ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್, ಜೆಡಿ(ಯು) ಅಧ್ಯಕ್ಷ ನಿತೀಶ್ ಕುಮಾರ್, ಎಲ್ಜೆಪಿ ಮುಖ್ಯಸ್ಥ ರಾಮ್ ವಿಲಾಸ್ ಪಾಶ್ವಾನ್ ಸೇರಿದಂತೆ ಇತರ ನಾಯಕರು ಹಾಜರಿದ್ದರು.

ರಾಷ್ಟ್ರಪತಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, "ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ನನ್ನನ್ನು ಪ್ರಧಾನಿಯಾಗಿ ನೇಮಕ ಮಾಡಿದ್ದು, ನೂತನ ಸರ್ಕಾರ ರಚನೆಗೆ ಆಹ್ವಾನಿಸಿದ್ದಾರೆ. ಭಾರತಕ್ಕೆ ಸಾಕಷ್ಟು ಅವಕಾಶಗಳಿದ್ದು, ಅವುಗಳ ಸಂಪೂರ್ಣ ಸದ್ಬಳಕೆ ಮಾಡಲು ಒಂದು ಕ್ಷಣವನ್ನೂ ವ್ಯಯಿಸದೇ ಕಾರ್ಯನಿರ್ವಹಿಸುತ್ತೇನೆ. ಜನರ ಆಕಾಂಕ್ಷೆಗಳನ್ನು ಪೂರೈಸಲು ಹಾಗೂ ನವಭಾರತ ನಿರ್ಮಾಣಕ್ಕಾಗಿ ನೂತನ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡುತ್ತೇನೆ" ಎಂದು ಹೇಳಿದರು.

More Stories

Trending News