ಕೃಷಿ ಕಾನೂನುಗಳ ರದ್ದತಿಗೆ ರಾಷ್ಟ್ರಪತಿ ಅಂಗೀಕಾರ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ಸಹಿ ಹಾಕಿದ್ದಾರೆ, ಅದರ ವಿರುದ್ಧ ರೈತರು ವಿಶೇಷವಾಗಿ ಹರಿಯಾಣ, ಪಂಜಾಬ್ ಮತ್ತು ಪಶ್ಚಿಮ ಉತ್ತರ ಪ್ರದೇಶದ ರೈತರು ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆದಿತ್ತು.

Edited by - ZH Kannada Desk | Last Updated : Dec 1, 2021, 09:29 PM IST
  • ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ಸಹಿ ಹಾಕಿದ್ದಾರೆ, ಅದರ ವಿರುದ್ಧ ರೈತರು ವಿಶೇಷವಾಗಿ ಹರಿಯಾಣ, ಪಂಜಾಬ್ ಮತ್ತು ಪಶ್ಚಿಮ ಉತ್ತರ ಪ್ರದೇಶದ ರೈತರು ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
 ಕೃಷಿ ಕಾನೂನುಗಳ ರದ್ದತಿಗೆ ರಾಷ್ಟ್ರಪತಿ ಅಂಗೀಕಾರ

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ಸಹಿ ಹಾಕಿದ್ದಾರೆ, ಅದರ ವಿರುದ್ಧ ರೈತರು ವಿಶೇಷವಾಗಿ ಹರಿಯಾಣ, ಪಂಜಾಬ್ ಮತ್ತು ಪಶ್ಚಿಮ ಉತ್ತರ ಪ್ರದೇಶದ ರೈತರು ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆದಿತ್ತು.

ಇದನ್ನೂ ಓದಿ : ಹೊಸ ರೂಪಾಂತರಿ ‘ಓಮಿಕ್ರಾನ್’ ವೈರಸ್ ವಿರುದ್ಧವೂ ಕೆಲಸ ಮಾಡುತ್ತಾ COVAXIN..?

ಸೋಮವಾರದಂದು ಚಳಿಗಾಲದ ಅಧಿವೇಶನದ ಮೊದಲ ದಿನದಂದು ಸಂಸತ್ತಿನ ಉಭಯ ಸದನಗಳಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ದಾಖಲೆ ಸಮಯದಲ್ಲಿ ಅಂಗೀಕರಿಸಲಾಯಿತು.ಪ್ರತಿಪಕ್ಷಗಳ ಚರ್ಚೆಯ ಬೇಡಿಕೆಯ ನಡುವೆಯೇ ಲೋಕಸಭೆಯಲ್ಲಿ ನಾಲ್ಕು ನಿಮಿಷಗಳಲ್ಲಿ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಅಂಗೀಕರಿಸಲಾಯಿತು.ರಾಜ್ಯಸಭೆಯಲ್ಲಿ ಅಲ್ಪಕಾಲದ ಚರ್ಚೆಯ ನಂತರ ಅಂಗೀಕಾರವಾಯಿತು.

ಇದನ್ನೂ ಓದಿ : ಓಮಿಕ್ರಾನ್ ಪರಿಣಾಮ ಡೆಲ್ಟಾಗಿಂತಲೂ ಅಪಾಯಕಾರಿ ಎಂದ ತಜ್ಞರು...!

ಒಂದು ವರ್ಷಕ್ಕೂ ಹೆಚ್ಚು ಕಾಲ ದೇಶಾದ್ಯಂತ ನಡೆದ ಬೃಹತ್ ರೈತ ಪ್ರತಿಭಟನೆಗಳ ನಂತರ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಉತ್ತರ ಪ್ರದೇಶ ಮತ್ತು ಪಂಜಾಬ್‌ನಂತಹ ರಾಜ್ಯಗಳಲ್ಲಿ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 19 ರಂದು ಹಿಂತೆಗೆದುಕೊಂಡಿದ್ದರು.

ಇದನ್ನೂ ಓದಿ : IPL : RCBಯ ಈ ಆಟಗಾರನನ್ನೇ ಟಾರ್ಗೆಟ್ ಮಾಡಲಿದೆ Mumbai Indians

ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಸಾವಿರಾರು ರೈತರು ನವೆಂಬರ್ 2020 ರಿಂದ ದೆಹಲಿಯ ಹೊರಗೆ"ಕಪ್ಪು ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಪ್ರತಿಭಟಿಸುತ್ತಿದ್ದಾರೆ.ಇದರಿಂದಾಗಿ ಬಿಜೆಪಿಗೆ ಉತ್ತರದ ರಾಜ್ಯಗಳಲ್ಲಿ ಭಾರಿ ಪ್ರತಿರೋಧ ವ್ಯಕ್ತವಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

More Stories

Trending News