President Election 2022 : ರಾಷ್ಟ್ರಪತಿ ಚುನಾವಣೆಯ ಬಗ್ಗೆ ಬಿಗ್ ನ್ಯೂಸ್ ಒಂದು ಹೊರಬಿದ್ದಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದೆ. ಇದೇ ವೇಳೆ ರಾಷ್ಟ್ರಪತಿ ಚುನಾವಣೆಯ ದಿನಾಂಕ ಘೋಷಣೆಯಾಗಲಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಕೊನೆಗೊಳ್ಳಲಿದೆ. ಅದಕ್ಕೂ ಮುನ್ನ ಚುನಾವಣಾ ಆಯೋಗ ರಾಷ್ಟ್ರಪತಿ ಚುನಾವಣೆ ನಡೆಸಲಿದೆ.


COMMERCIAL BREAK
SCROLL TO CONTINUE READING

ಜುಲೈ 24 ರಂದು ರಾಷ್ಟ್ರಪತಿ ಕೋವಿಂದ್ ಅವರ ಅಧಿಕಾರಾವಧಿ ಮುಕ್ತಾಯ


ಸಂವಿಧಾನದ 62 ನೇ ವಿಧಿಯ ಪ್ರಕಾರ, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24 ರಂದು ಕೊನೆಗೊಳ್ಳಲಿದೆ ಮತ್ತು ಮುಂದಿನ ರಾಷ್ಟ್ರಪತಿಯನ್ನು ಆಯ್ಕೆ ಮಾಡುವ ಚುನಾವಣೆಯನ್ನು ಅದಕ್ಕೂ ಮೊದಲು ಪೂರ್ಣಗೊಳಿಸಬೇಕು ಎಂಬುದು ಈ ವಿಧಿಯ ನಿಯಮವಾಗಿದೆ. 


ಇದನ್ನೂ ಓದಿ : Karti Chidambaram Case : ಕಾರ್ತಿ ಚಿದಂಬರಂ ಪರ ವಾದ ಮಂಡಿಸಿದ ಕಪಿಲ್ ಸಿಬಲ್, ಜಾಮೀನು ವಿರೋಧಿಸಿದ ED 


ಇವರು ಮತ ಚಲಾಯಿಸಬಹುದು


ಸಂಸತ್ತಿನ ಉಭಯ ಸದನಗಳ ಸದಸ್ಯರ ಜೊತೆಗೆ, ಎಲ್ಲಾ ರಾಜ್ಯಗಳ ವಿಧಾನಸಭೆಗಳ ಚುನಾಯಿತ ಸದಸ್ಯರು, ರಾಷ್ಟ್ರೀಯ ರಾಜಧಾನಿ ದೆಹಲಿ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳು ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಬಹುದು. ಆದ್ರೆ, ರಾಜ್ಯಸಭೆ, ಲೋಕಸಭೆ ಅಥವಾ ವಿಧಾನಸಭೆಗಳ ನಾಮನಿರ್ದೇಶಿತ ಸದಸ್ಯರು ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕನ್ನು ಹೊಂದಿಲ್ಲ.


2017 ರಲ್ಲಿ ನಡೆದ ಕೊನೆಯ ಚುನಾವಣೆ


ಅದೇ ರೀತಿ ರಾಜ್ಯಗಳ ವಿಧಾನ ಪರಿಷತ್ತಿನ ಸದಸ್ಯರಿಗೂ ರಾಷ್ಟ್ರಪತಿ ಚುನಾವಣೆಯಲ್ಲಿ ಪಾಲ್ಗೊಳ್ಳುವ ಹಕ್ಕು ಇಲ್ಲ. 2017ರಲ್ಲಿ ರಾಷ್ಟ್ರಪತಿ ಚುನಾವಣೆಗೆ ಜುಲೈ 17ರಂದು ಮತದಾನ ನಡೆದಿದ್ದು, ಜುಲೈ 20ರಂದು ಮತ ಎಣಿಕೆ ನಡೆದಿರುವುದು ಗಮನಾರ್ಹ. 


ಇದನ್ನೂ ಓದಿ : 'ಉತ್ತರ ಪ್ರದೇಶದ ಶಾಲೆಗಳಲ್ಲಿ ಮರಾಠಿಯನ್ನು ಐಚ್ಛಿಕ ಭಾಷೆಯಾಗಿ ಪರಿಚಯಿಸಿ'


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ