Today gold price: ಇಂದು ಭಾರತದಲ್ಲಿ 24 ಕ್ಯಾರೆಟ್ ಚಿನ್ನದ (10 ಗ್ರಾಂ) ಬೆಲೆ 61,100 ರೂ ಆಗಿದ್ದರೆ, 22 ಕ್ಯಾರೆಟ್ (10 ಗ್ರಾಂ) ಬೆಲೆ 56,000 ರೂ. ಆಗಿದೆ. ಅಂದರೆ ಪ್ರತೀ ಕ್ಯಾರೆಟ್ ಚಿನ್ನದ ಬೆಲೆಯ ಮೇಲೆ 300 ರೂ, ಹೆಚ್ಚಳ ಕಂಡಿದೆ.
ಇದನ್ನೂ ಓದಿ: Share Market Update: ಸತತ ಎರಡು ದಿನಗಳ ಕುಸಿತಕ್ಕೆ ಬಿತ್ತು ಬ್ರೇಕ್, ಲೋಹ-ಆಟೋ ಸೇಕ್ಟರ್ ಗಳಲ್ಲಿ ಭಾರಿ ಖರೀದಿ
ದೇಶದಲ್ಲಿ ಅಡುಗೆ ಎಣ್ಣೆ ಮತ್ತು ಸಿಲಿಂಡರ್ ದರದಲ್ಲಿ ಇಳಿಕೆ ಕಂಡುಬಂದಿದೆ. ಆದರೆ ಹಳದಿ ಲೋಹದ ಬೆಲೆ ಮಾತ್ರ ಏರಿಕೆ ಕಾಣುತ್ತಲೇ ಇದೆ. ಸದ್ಯ ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ (10 ಗ್ರಾಂ) ಬೆಲೆ ರೂ 61,250 ಆಗಿದ್ದರೆ, 22 ಕ್ಯಾರೆಟ್ (10 ಗ್ರಾಂ) ಬೆಲೆ ರೂ 56,150 ಆಗಿದೆ. ಮುಂಬೈನಲ್ಲಿ 24 ಕ್ಯಾರೆಟ್ ಚಿನ್ನದ ರೂ 61,100 ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ರೂ 56,000, ಚೆನ್ನೈನಲ್ಲಿ 24 ಕ್ಯಾರೆಟ್ ಚಿನ್ನದ (10 ಗ್ರಾಂ) ಬೆಲೆ ರೂ 61,505 ಇದ್ದರೆ, 22 ಕ್ಯಾರೆಟ್ (10 ಗ್ರಾಂ) ಬೆಲೆ ರೂ 56,380 ಇದೆ.
ಕೋಲ್ಕತ್ತಾದಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ರೂ 61,100 ಆದರೆ, 22 ಕ್ಯಾರೆಟ್ (10 ಗ್ರಾಂ) ಬೆಲೆ ರೂ 56,000 ಇದೆ. ಹೈದರಾಬಾದ್ ನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ರೂ 61,360 ಇದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ ರೂ 56,000 ಆಗಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ರೂ 61,100 ಆದರೆ, 22 ಕ್ಯಾರೆಟ್ (10 ಗ್ರಾಂ) ದರ ರೂ 56,300 ಆಗಿದೆ.
ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ಇಂದು 24 ಕ್ಯಾರೆಟ್ ಚಿನ್ನ (10 ಗ್ರಾಂ) 61,100 ರೂ. ಇದ್ದು, 22 ಕ್ಯಾರೆಟ್ ಚಿನ್ನ (10 ಗ್ರಾಂ) 56,000 ರೂ. ಆಗಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಹ 10 ಗ್ರಾಂ ಚಿನ್ನದ ಬೆಲೆಯಲ್ಲಿ 300 ರೂ. ಹೆಚ್ಚಳ ಕಂಡು ಬಂದಿದೆ. ಒಟ್ಟಾರೆಯಾಗಿ 24 ಕ್ಯಾರೆಟ್ 10 ಗ್ರಾಂ ಬಂಗಾರ ಬೆಲೆ 61,150 ರೂ. ಆಗಿದ್ದರೆ 22 ಕ್ಯಾರೆಟ್ ಚಿನ್ನದ ಬೆಲೆ 56,050 ರೂ, ಇದೆ.
ಇನ್ನು ಚಿನ್ನದ ಶುದ್ಧತೆಯನ್ನು ಗುರುತಿಸಲು ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಸ್ಟ್ಯಾಂಡರ್ಡೈಸೇಶನ್ ಮೂಲಕ ಹಾಲ್ ಮಾರ್ಕ್ ಗಳನ್ನು ನೀಡಲಾಗುತ್ತದೆ. 24 ಕ್ಯಾರೆಟ್ ಚಿನ್ನದ ಆಭರಣಗಳ ಮೇಲೆ 999, 23 ಕ್ಯಾರೆಟ್ ನಲ್ಲಿ 958, 22 ಕ್ಯಾರೆಟ್ ನಲ್ಲಿ 916, 21 ಕ್ಯಾರೆಟ್ ನಲ್ಲಿ 875 ಮತ್ತು 18 ಕ್ಯಾರೆಟ್ ನಲ್ಲಿ 750 ಎಂದು ಬರೆಯಲಾಗಿರುತ್ತದೆ. ಹೆಚ್ಚಾಗಿ ಚಿನ್ನವನ್ನು 22 ಕ್ಯಾರೆಟ್ ನಲ್ಲಿ ಮಾರಾಟ ಮಾಡಲಾಗುತ್ತದೆ. ಇನ್ನೂ ಕೆಲವರು 18 ಕ್ಯಾರೆಟ್ ಗಳನ್ನು ಸಹ ಬಳಸುತ್ತಾರೆ.
ಇದನ್ನೂ ಓದಿ: ICICI ಹಾಗೂ ಪಿಎನ್ಬಿ ಗ್ರಾಹಕರಿಗೊಂದು ಶಾಕಿಂಗ್ ಸುದ್ದಿ, ಹೆಚ್ಚಾಗಲಿದೆ ಇಎಂಐ ಹೊರೆ
22 ಮತ್ತು 24 ಕ್ಯಾರೆಟ್ ಚಿನ್ನದ ನಡುವಿನ ವ್ಯತ್ಯಾಸ:
24 ಕ್ಯಾರೆಟ್ ಚಿನ್ನವು 99.9 ಪ್ರತಿಶತ ಮತ್ತು 22 ಕ್ಯಾರೆಟ್ 91 ಪ್ರತಿಶತ ಶುದ್ಧವಾಗಿದೆ. 22 ಕ್ಯಾರೆಟ್ ಚಿನ್ನದಲ್ಲಿ ತಾಮ್ರ, ಬೆಳ್ಳಿ, ಸತು ಮುಂತಾದ ಇತರ ಲೋಹಗಳನ್ನು ಶೇ.9 ರಷ್ಟು ಮಿಶ್ರಣ ಮಾಡಿ ಆಭರಣಗಳನ್ನು ತಯಾರಿಸಲಾಗುತ್ತದೆ. 24 ಕ್ಯಾರೆಟ್ ಚಿನ್ನವು ಅತ್ಯಂತ ಪರಿಶುದ್ಧವಾಗಿದೆ. ಆದರೆ 24 ಕ್ಯಾರೆಟ್ ಚಿನ್ನದಿಂದ ಆಭರಣವನ್ನು ಮಾಡಲಾಗುವುದಿಲ್ಲ. ಅದಕ್ಕಾಗಿಯೇ ಹೆಚ್ಚಿನ ಅಂಗಡಿಯವರು 22 ಕ್ಯಾರೆಟ್ ನಲ್ಲಿ ಚಿನ್ನವನ್ನು ಮಾರಾಟ ಮಾಡುತ್ತಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.